ಚಿತ್ರದುರ್ಗ: ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ (ಕೆ-ಸೆಟ್) ಪರೀಕ್ಷೆಯು ಜುಲೈ 25 ರಂದು ದಾವಣಗೆರೆ ನಗರದ 09 ವಿವಿಧ ಉಪಕೇಂದ್ರಗಳಲ್ಲಿ ನಡೆಯಲಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಅಭ್ಯರ್ಥಿಗಳೇ ಕುಡಿಯಲು ನೀರಿನ ಬಾಟಲಿ ತರಬೇಕು. ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಹಾಗೂ ಇನ್ನಿತರೆ ಯಾವುದೇ ರೀತಿಯ ಎಲೆಕ್ಟಾçನಿಕ್ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ.
ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಅಂತರ್ಜಾಲ ತಾಣದಲ್ಲಿ ಪ್ರವೇಶ ಪತ್ರ ಹಾಗೂ ಇನ್ನಿತರ ಮಾಹಿತಿಗಳನ್ನು ನೀಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಅಂತರ್ಜಾಲ ತಾಣ http://kset.uni-mysore.ac.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು.ಭಾವಚಿತ್ರವಿರುವ ಮೂಲ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರಕ್ಕೆ ತರಬೇಕು. ಪ್ರವೇಶಪತ್ರವಿಲ್ಲದ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ದಾವಣಗೆರೆ ವಿಶ್ವವಿದ್ಯಾಲಯ ಕೆ-ಸೆಟ್ ನೋಡಲ್ ಅಧಿಕಾರಿ ಪ್ರೊ.ಜೆ.ಕೆ.ರಾಜು ಎಂದು ತಿಳಿಸಿದ್ದಾರೆ.