ಬೆಳಗಾಯಿತು ವಾರ್ತೆ
ಕೊಟ್ಟೂರು: ಪಟ್ಟಣದ ಕೊಟ್ಟೂರೇಶ್ವರ ಮಹಾವಿದ್ಯಾಲಯದ ಆಡಳಿತ ಮಂಡಆಯ ನೂತನ ಅಧ್ಯಕ್ಷರಾದ ಸಿದ್ಧರಾಮ ಕಲ್ಮಠ ಅವರ ಪದಗ್ರಹಣ ಕಾರ್ಯಕ್ರಮವನ್ನು ಜುಲೈ 15ರ ಗುರುವಾರ ಕಾಲೇಜಿನ ಡಾಕ್ಟರ್ ಎಚ್ ಜಿ ರಾಜ್ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಿನ್ಸಿಪಾಲ್ ಡಿ ರವೀಂದ್ರಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದಿನ ಅಧ್ಯಕ್ಷರಾದ ಚನ್ನಬಸವನಗೌಡ ಅವರ ಸೇವಾವಧಿ ಪೂರ್ಣಗೊಂಡಿದ್ದು ಕೊಟ್ಟೂರೇಶ್ವರ ಮಹಾವಿದ್ಯಾಲಯದ ನೂತನ ಮಂಡಳಿ ಅಧ್ಯಕ್ಷರಾಗಿ ಸಿದ್ಧರಾಮಯ್ಯ ಕಲ್ಮಠ ರವರು ಅಧಿಕಾರವನ್ನು ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.