ಬೆಳಗಾಯಿತು ವಾರ್ತೆ
ಕೊಟ್ಟೂರು: ಇಂದಿನ ಯುವ ಜನಾಂಗ ಆರಂಭದಲ್ಲಿ ಸಂತೋಷ, ವಿನೋದಕ್ಕಾಗಿ ಮಾದಕ ದ್ರವ್ಯ ಸೇವನೆ ಆರಂಭಿಸುತ್ತಾರೆ. ಅದು ಚಟವಾಗಿ ಬದುಕನ್ನೇ ನಾಶ ಮಾಡುವ ಮಟ್ಟಕ್ಕೆ ಬೆಳೆದು ನಿಲ್ಲುತ್ತದೆ. ಹಾಗಾಗಿ ಯುವಜನತೆ ಜಾಗೃತರಾಗಿರಬೇಕು ಎಂದು ಕೊಟ್ಟೂರು ಪೊಲೀಸ್ ಠಾಣೆಯ ಸಿಪಿಐ ಸೋಮಶೇಖರ್ ಕೆಂಚರೆಡ್ಡಿ ಹೇಳಿದರು.
ಭಾನುವಾರ ಪಟ್ಟಣದ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಅಂತರ ರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಪಿಎಸ್ ಐ ವಿಜಯ್ ಕೃಷ್ಣ,
ಗ್ರಾಮದ ಸಾರ್ವಜನಿಕರು ಭಾಗವಹಿಸಿದ್ದರು
ವರದಿ: ಕೊಟ್ರೇಶ್ ತೆಗ್ಗಿನಕೇರಿ