ಕೆಪಿಎಸ್‌ಸಿ: ವ್ಯಕ್ತಿತ್ವ ಪರೀಕ್ಷೆಯ ವೇಳಾಪಟ್ಟಿ ವಾಪಸ್

ಬೆಳಗಾಯಿತು ವಾರ್ತೆ | Www.belagayithu.in
ಬೆಂಗಳೂರು: ಕೆಎಎಸ್‌ ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ನೇಮಕಾತಿಗಾಗಿ ನಿಗದಿಪಡಿಸಲಾಗಿದ್ದ ವ್ಯಕ್ತಿತ್ವ ಪರೀಕ್ಷೆಯ ವೇಳಾಪಟ್ಟಿಯನ್ನು ಆಡಳಿತಾತ್ಮಕ ಕಾರಣಗಳಿಂದ ಹಿಂಪಡೆಯಲಾಗಿದೆ.
ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದು, ಪೂರ್ವದಲ್ಲಿ ಪ್ರಕಟಿಸಿದ್ದ ವೇಳಾಪಟ್ಟಿಯಂತೆ ನಡೆಯಬೇಕಿದ್ದ ವ್ಯಕ್ತಿತ್ವ ಪರೀಕ್ಷೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
23–03–2026 ರಿಂದ 04–05–2026ರ ನಡುವೆ ವಿವಿಧ ದಿನಾಂಕಗಳಂದು ವ್ಯಕ್ತಿತ್ವ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು. ಇದೀಗ ಆಡಳಿತಾತ್ಮಕ ಕಾರಣಗಳಿಂದ ವೇಳಾಪಟ್ಟಿಯನ್ನು ಹಿಂಪಡೆಯಲಾಗಿದೆ.
ಹೊಸ ವೇಳಾಪಟ್ಟಿಯನ್ನು ನಂತರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles