ಬೆಳಗಾಯಿತು ವಾರ್ತೆ / https://belagayithu.in
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಹೊಸದಾಗಿ ಆರಂಭಿಸಿರುವ ಅಶ್ವಮೇಧ ಬಸ್ಸುಗಳಲ್ಲೂ (Ashwamedha Classic buses) ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಘೋಷಣೆ ಮಾಡಲಾಗಿದೆ. ಕೆಎಸ್ಆರ್ಟಿಸಿಗೆ ಒಟ್ಟು ಸಾವಿರ ಹೊಸ ಬಸ್ಗಳು ಬರಲಿದ್ದು, ಮೊದಲ ಹಂತದಲ್ಲಿ ನೂರು ಹೊಸ ಕ್ಲಾಸಿಕ್ ಬಸ್ಗಳು ಬಂದಿವೆ. ಬಣ್ಣ ಬಣ್ಣದ ಬಗೆ ಬಗೆಯ ಹೂವುಗಳಿಂದ ಸಿಂಗಾರಗೊಂಡಿರುವ ಅಶ್ವಮೇಧ ಬಸ್ಗಳಿಗೆ ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಸೋಮವಾರ ಚಾಲನೆ ನೀಡಿದರು. ಅಶ್ವಮೇಧ ಬಸ್ಗೆ ಚಾಲನೆ ಸಮಾರಂಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಹ ಹಾಜರಿದ್ದರು.
ಅಶ್ವಮೇಧ ಕ್ಲಾಸಿಕ್ ಬಸ್ ವಿಶೇಷತೆಗಳು
ಸದ್ಯ ಕಾರ್ಯಾರಂಭ ಮಾಡುತ್ತಿರುವ ನೂರು ಅಶ್ವಮೇಧ ಕ್ಲಾಸಿಕ್ ಬಸ್ಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ 12 ಪ್ಯಾನಿಕ್ ಬಟನ್, ಜಿಪಿಎಸ್, ಎರಡು ರೇರ್ ಕ್ಯಾಮರಾ, ಮೊಬೈಲ್ ಫೋನ್ ಚಾರ್ಜ್ ಹಾಕಿಕೊಳ್ಳಲು ಆರು ಚಾರ್ಜಿಂಗ್ ಪಾಯಿಂಟ್ ವ್ಯವಸ್ಥೆ ಮಾಡಲಾಗಿದೆ. 52 ಸೀಟು, ಬಸ್ಸಿನ ಒಳಗೆ ಮತ್ತು ಹೊರ ಭಾಗದಲ್ಲಿ ಎಲ್ಇಡಿ ಮಾರ್ಗಫಲಕ, ಪ್ರಯಾಣಿಕರು ಲಗೆಜ್ ಇಡಲು ದೊಡ್ಡದಾದ ಸ್ಥಳದ ವ್ಯವಸ್ಥೆ ಮಾಡಲಾಗಿದೆ.