ಚಿತ್ರದುರ್ಗ: ಒಂದು ಕಡೆ ಸಾರಿಗೆ ನೌಕರರ ಮುಷ್ಕರ ಮುಂದುವರಿದಿರುವಂತೆಯೇ ಸರ್ಕಾರದ ಒತ್ತಡಕ್ಕೆ ಮಣಿದು ಕೆಲ ಸಾರಿಗೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲಾರಂಭಿಸಿದ್ದಾರೆ. ಕೆಲ ಚಾಲಕರು ಬಸ್ ಸ್ಟೇರಿಂಗ್ ಹಿಡಿಯುತ್ತಿರೋ ಸಂದರ್ಭದಲ್ಲಿಯೇ ಸಾರಿಗೆ ಸಿಬ್ಬಂದಿಯ ಕುಟುಂಬದ ಸದಸ್ಯರು ರಸ್ತೆಗಿಳಿದಿದು ಬೇಡಿಕೆ ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡವನ್ನು ಹಾಕಿದ್ದಾರೆ.
ಸಾರಿಗೆ ನೌಕರರ ಮುಷ್ಕರ ಆರನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟಾದರೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ, ರಸ್ತೆಗಿಳಿದ ಸಾರಿಗೆ ಸಿಬ್ಬಂದಿ ಕುಟುಂಬ ಸದಸ್ಯರು ವಿನೂತನವಾಗಿ ಪ್ರತಿಭಟಿಸಿದರು. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು. ಮಕ್ಕಳೊಂದಿಗೆ ಪ್ರತಿಭಟನೆ ಮಾಡಿದ ಕುಟುಂಬದ ಸದಸ್ಯರು, ಸರ್ಕಾರದ ಧೋರಣೆಯನ್ನು ಖಂಡಿಸಿದರು. ಸಾರಿಗೆ ನೌಕರರು ಅತ್ಯಂತ ಕಡಿಮೆ ವೇತನಕ್ಕೆ ದುಡೀತಿದಾರೆ. ಆದರೂ ವೇತನ ಹೆಚ್ಚಳಕ್ಕೆ ಮುಂದಾಗ್ತಿಲ್ಲ. ನೌಕರರನ್ನು ವಜಾಗೊಳಿಸಿ, ವರ್ಗಾವಣೆ ಮಾಡಿ ಹೋರಾಟ ಹತ್ತಿಕ್ಕಲು ಯತ್ನಿಸಲಾಗ್ತಿದೆ ಎಂದು ಆರೋಪಿಸಿದರು.