ಕಲಬುರಗಿ: ಕರ್ನಾಟಕದಲ್ಲಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ 6ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.ಮುಷ್ಕರ ನಡೆಸುತ್ತಿರುವ ನೌಕರರ ಮಾರ್ಚ್ ತಿಂಗಳ ವೇತನವನ್ನು ತಡೆ ಹಿಡಿಯಲಾಗಿದೆ. ಮುಷ್ಕರದ ನಡುವೆಯೂ ಕೆಲವು ನೌಕರರು ಸ್ವಯಂ ಪ್ರೇರಿತವಾಗಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಅಂತಹವರಿಗೆ ವೇತನವನ್ನು ನೀಡಲಾಗಿದೆ.