ಓಪಿಡಿಯಲ್ಲಿ ಮೂಲ ಭೂತ ಸೌಕರ್ಯ ಕಾಣೆ: ಆಕ್ರೋಶ

ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: ನಗರದ ಓಪಿಡಿ ಆಸ್ಪತ್ರೆಯಲ್ಲಿ ರಕ್ತಪರೀಕ್ಷೆ ವರದಿ ಪಡೆಯಲು ಬೆಳಗ್ಗಿನಿಂದಲೇ ಕಾಯುತ್ತಿದ್ದ ವ್ಯಕ್ತಿಯೊಬ್ಬರು ಬಿಸಿಲಿನ ತಾಪ ಸಹಿಸದೇ ಅಸ್ವಸ್ಥರಾಗಿ ಕೆಳಗೆ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯವಾದ ಘಟನೆ ನಡೆದಿದೆ.
ನಗರದ 105ನೇ ಎಚ್‌.ಐ.ವಿ ಪರೀಕ್ಷಾ ಕೇಂದ್ರದ ಬಳಿ ಈ ಘಟನೆ ಸಂಭವಿಸಿದೆ. ಬೆಳಿಗ್ಗೆಯಿಂದಲೇ ಬ್ಲಡ್ ರಿಪೋರ್ಟ್ ಪಡೆಯಲು ಕಾಯುತ್ತಿದ್ದ ವ್ಯಕ್ತಿ ತೀವ್ರ ಬಿಸಿಲಿನಿಂದ ಅಸ್ವಸ್ಥರಾಗಿ ನೆಲಕ್ಕುರುಳಿದ್ದು, ತಲೆಗೆ ಗಾಯವಾಗಿ ಭಾರಿ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ತಕ್ಷಣ ಸ್ಥಳದಲ್ಲಿದ್ದವರು ಗಾಯಾಳುವಿಗೆ ಸಹಾಯ ಮಾಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಿದ್ದಾರೆ.
ಈ ಘಟನೆಯನ್ನು ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಸಾರ್ವಜನಿಕರು ಆರೋಪಿಸಿದ್ದು, ಆಸ್ಪತ್ರೆಯಲ್ಲಿ ಸರಿಯಾದ ವ್ಯವಸ್ಥೆಗಳ ಕೊರತೆ, ಕಾಯುವವರಿಗೆ ನೆರಳಿನ ವ್ಯವಸ್ಥೆ ಇಲ್ಲದಿರುವುದು ಇಂತಹ ಘಟನೆಗಳಿಗೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುವ ಸಾಧ್ಯತೆ ಇದ್ದು, ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles