ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ಪಟೇಲ್ ನಗರದ ಶ್ರೀ ಸಣ್ಣ ದುರ್ಗಮ್ಮ ದೇವಸ್ಥಾನದಲ್ಲಿ 11ನೇ ವರ್ಷದ ದಸರಾ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಸೋಮವಾರ (ಅ.12) ಎರಡನೇ ದಿನದ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿತು.
ಮಹೋತ್ಸವದ ಎರಡನೇ ದಿನದಂದು ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ಅಲಂಕಾರದಲ್ಲಿ ದೇವಿಯ ಮೂರ್ತಿಯನ್ನು ಶೃಂಗರಿಸಲಾಗಿದ್ದು, ಭಕ್ತರಿಗೆ ದಿವ್ಯ ದರ್ಶನದ ವ್ಯವಸ್ಥೆ ಮಾಡಲಾಯಿತು. ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯುವ ಉತ್ಸವದಲ್ಲಿ ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.
11ನೇ ವರ್ಷದ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಪ್ರತಿದಿನ ವಿವಿಧ ಅಲಂಕಾರಗಳೊಂದಿಗೆ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾದ್ದು, ಪ್ರತಿದಿನ ದೇವಿಗೆ ವಿಶೇಷ ಅಲಂಕಾರ ಮಾಡಲಾಗುತ್ತಿದೆ.





