ಬಳ್ಳಾರಿ: ಇಂದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಕ್ರೀಡಾ ಸಚಿವ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಪಾಲಿಕೆ ಮಹಾ ಪೌರರಾದ ಡಿ. ತ್ರಿವೇಣಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮೀಶ್ರಾ, ಎಸ್ಪಿ ರಂಜಿತ್ ಕುಮಾರ್ ಭಂಡಾರು, ಸಿಇಓ ರಾಹುಲ್ ಶರಣಪ್ಪ ಶಂಕನೂರು, ಎಸಿ ಹೇಮಂತ್ ಕುಮಾರ್, ಮಾಜಿ ಮಹಾ ಪೌರರಾದ ಜಾನಕಿ, ಮಾಜಿ ಮೇಯರ್ ರಾಜೇಶ್ವರಿ ಸುಬ್ಬರಾಯಡು ಸೇರಿದಂತೆ ಹಲವಾರು ಗೃಹಿಣಿಯರು ಹಾಜರಿದ್ದರು.