34.6 C
Bellary
Sunday, May 12, 2024

Localpin

spot_img

ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಆರೋಪ


ಬೆಳಗಾಯಿತು ವಾರ್ತೆ
ಬಳ್ಳಾರಿ: ಹಿಂದು ರಾಷ್ಟ್ರದಲ್ಲಿ ಹಿಂದು ಗಳಿಗೆ ರಕ್ಷಣೆ ಇಲ್ಲ. ಹಾಗಾಗಿ ದಿನೆ ದಿನೆ ಮಹಿಳೆಯರ ಕೊಲೆ, ರೆಪ್ ಗಳಂತಹ ದುರ್ಘಟನೆ ರಾಜ್ಯದಲ್ಲಿ ನಡೆಯುತ್ತಿದೆ. ಇದಕ್ಕೆ ರಾಜ್ಯ ಸರ್ಕಾರದ ಕಾನೂನು ಸುವ್ಯವಸ್ಥೆ ಸಂಪೂರ್ಣ ದಹಗೆಟ್ಟಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅನೀಲ್ ಕುಮಾರ್ ಮೋಕ ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

ನಗರದ ವಾಜಪೇಯಿ ಬಡಾವಣೆಯಲ್ಲಿ ಇರುವ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ಹದಗೆಟ್ಟಿರುವುದಕ್ಕೆ ಮೊನ್ನೆ ನಡೆದ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಆವರಣದಲ್ಲಿ ಆದ ನೇಹಾ ಹೀರೆಮಠ ಅವರ ಕೊಲೆ ಕಾರಣವಾಗಿದೆ. ಇದೇ ರೀತಿ ರಾಜ್ಯದಲ್ಲಿ ಅನೇಕ ಕಡೆ ಪ್ರಕರಣಗಳು ಬೆಳಕಿಗೆ ಬಂದಿದೆ. ಆದರೆ ಸರ್ಕಾರ ಆರೋಪಿಗಳನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದೆ ಎಂದರು.

ಹುಬ್ಬಳ್ಳಿಯ ನೇಹಾ ಹಿರೇಮಠ ಅವರ ಅಮಾನುಷ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಅದರೆ, ತನ್ನದೇ ಪಕ್ಷದ ಚುನಾಯಿತ ಪ್ರತಿನಿಧಿಯ ಮಗಳಿಗೆ ಬದುಕಿನ ಗ್ಯಾರಂಟಿ ಇಲ್ಲದಂತಾಗಿದೆ. ಸಾವಿಗೀಡಾದ ಹೆಣ್ಣು ಮಗಳ ಬಗ್ಗೆ ಹಗುರವಾಗಿ ಮಾತಾಡುವ ಕಾಂಗ್ರೆಸ್, ಫಯಾಜ್ ಮನೆಗೆ ಪೊಲೀಸ್ ಭದ್ರತೆ ಕೊಡುತ್ತದೆ. ಕಾಂಗ್ರೆಸ್ ಸರ್ಕಾರ ಬಂದ ನಂತರ ಮತಾಂಧಶಕ್ತಿಯ ಅಟ್ಟಹಾಸ ಅತಿರೇಕಕ್ಕೇರಿದೆ.
ತುಷ್ಟಿಕರಣದ ಅತಿರೇಕ ಇದಕ್ಕೆಲ್ಲ ನೇರ ಕಾರಣವಾಗಿದೆ.
ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಜನರು ಆತಂಕ ಪಟ್ಟು ತಮ್ಮ ಬದುಕಿನ ಗ್ಯಾರಂಟಿಯನ್ನು ಕಳೆದುಕೊಂಡಿದ್ದಾರೆ. ಇಷ್ಟೆಲ್ಲ ನಡೆದರೂ ಒಂದು ಖಂಡನೆಯ ಮಾತನ್ನು ಕಾಂಗ್ರೆಸ್ ನವರು ಮಾತಾಡುತ್ತಿಲ್ಲ, ಆದರೆ ಪಕ್ಷಭೇದ ಮರೆತು ಬಿಜೆಪಿ ನಾಯಕರು ಸಾಂತ್ವನ ಹೇಳಲು ತೆರಳಿದ್ದಾರೆ ಎಂದರು.

ಈ ಸಂದರ್ಭದಲ್ಲಿ ವಿದಾನ ಪರಿಷತ್ತ್ ಸದಸ್ಯ ವೈ.ಎಂ ಸತೀಶ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೋಮನಗೌಡ,ಅಂಜೀನಪ್ಪ ಸೇರಿದಂತೆ ಇತರರು ಹಾಜರಿದ್ದರು.

ಏ. ೨೫ ಕ್ಕೆ ಕುರಗೋಡಿಗೆ ಬಿಎಸ್ ವೈ ಆಗಮನ
ಚುನಾವಣೆಗೆ ಸಂಬಂಧಿಸಿದಂತೆ ಕುರಗೋಡು ತಾಲೂಕ್ಕಿಗೆ
ಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ಬರುತ್ತಿದ್ದಾರೆ. ಅಂದು ಸಾಕಷ್ಟು ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles