ಬೆಳಗಾಯಿತು ವಾರ್ತೆ | Www.belagayithu.in
ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಒಟ್ಟು ನಾಲ್ಕು ಸೀಟುಗಳ ಪೈಕಿ ಒಂದು ಸ್ಥಾನವನ್ನು ಮಿತ್ರ ಪಕ್ಷ ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ ಮೂರು ಈಶಾನ್ಯ ಶಿಕ್ಷಕರ ಕ್ಷೇತ್ರ, ಪೂರ್ವ ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಇನ್ನುಳಿದ 1 ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. ಇದರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಹಾಗೂ ಬಿಜೆಪಿ ವಿಧಾನ ಪರಿಷತ್ ಚುನಾವಣೆಗೂ ತಮ್ಮ ಮೈತ್ರಿಯನ್ನು ಮುಂದುವರೆಸಿದೆ.
ಯಾರು ಯಾವ ಕ್ಷೇತ್ರಕ್ಕೆ?
ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಸುಶೀಲ್ ನಮೋಶಿ, ಪೂರ್ವ ಪದವೀಧರ ಕ್ಷೇತ್ರಕ್ಕೆ ಎಸ್.ವಿ ಸಂಕನೂರ್ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದ ಟಿಕೆಟ್ ಕೆ.ಎಂ.ಸುರೇಶ್ ಅವರಿಗೆ ನೀಡಲಾಗಿದೆ. ಇನ್ನುಳಿದ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದು, ಜೆಡಿಎಸ್ ಯಾರನ್ನು ಕಣಕ್ಕಿಳಿಸಲಿದೆ ಎನ್ನುವುದೇ ಕುತೂಹಲ ಮೂಡಿಸಿದೆ.





