36.2 C
Bellary
Saturday, April 27, 2024

Localpin

spot_img

ಲೋಕಸಭಾ ಚುನಾವಣೆ: ಬಳ್ಳಾರಿಯಿಂದ ಶ್ರೀರಾಮುಲು ಸ್ಪರ್ಧೆ

ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ಬಿಜೆಪಿ ಪಕ್ಷ ಲೋಕಸಭೆ ಚುನಾವಣೆಯ ಎರಡನೇ ಪಟ್ಟಿ  ಬಿಡುಗಡೆ ಮಾಡಿದ್ದು, ಬಳ್ಳಾರಿ ಲೋಕಸಭಾ ಕ್ಷೇತ್ರದ ಟಿಕೆಟ್ ನ್ನು ಮಾಜಿ ಸಚಿವ ಶ್ರೀರಾಮುಲು ಅವರಿಗೆ ನೀಡಲಾಗಿದೆ.

ಈ ಹಿಂದೆ 2014ರಲ್ಲಿ ಮೊದಲ ಬಾರಿಗೆ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಶ್ರೀರಾಮುಲು ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ತದನಂತರದಲ್ಲಿ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಸಭಾ ಚುನಾವಣೆ ಸ್ಪರ್ಧೆ ಮಾಡಿದ ಹಿನ್ನೆಲೆಯಲ್ಲಿ ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ವಿ.ಎಸ್. ಉಗ್ರಪ್ಪ ಅವರು ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2019ರಲ್ಲಿ ದೇವೇಂದ್ರಪ್ಪ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದರು. ಇದೀಗ ಎರಡನೇ ಬಾರಿಗೆ ಶ್ರೀರಾಮುಲು ಅವರು ಲೋಕಸಭಾ ಚುನಾವಣೆ ಸ್ಪರ್ಧಿಸಲು ಮುಂದಾಗಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles