ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ನಗರದ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಿವಣ್ಣ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಅಚ್ಚರಿ ದಾಳಿ ನಡೆಸಿದರು.
ಸಿದ್ಧಾರ್ಥ್ ನಗರದಲ್ಲಿರುವ ಶಿವಣ್ಣ ಅವರ ನಿವಾಸ ಸೇರಿದಂತೆ ಬಳ್ಳಾರಿಯ ಕಚೇರಿ ಮತ್ತು ಇತರೆ ಸ್ಥಳಗಳು ಸೇರಿ ಒಟ್ಟು ನಾಲ್ಕು ಕಡೆಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶಿವಣ್ಣ ವಿರುದ್ಧ ಹಲವು ಆರೋಪಗಳು ಕೇಳಿಬಂದಿದ್ದು, ವಿಶೇಷವಾಗಿ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಬಗ್ಗೆ ಲೋಕಾಯುಕ್ತಕ್ಕೆ ದೂರುಗಳು ಸಲ್ಲಿಕೆಯಾಗಿದ್ದವು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ದಾಳಿಯ ವೇಳೆ ಅಧಿಕಾರಿಗಳು ಪ್ರಮುಖ ದಾಖಲೆಗಳು, ಆಸ್ತಿ ವಿವರಗಳು ಹಾಗೂ ಹಣಕಾಸು ವ್ಯವಹಾರಗಳ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಪರಿಶೀಲನೆ ಇನ್ನೂ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ನಂತರ ಹೊರಬರುವ ಸಾಧ್ಯತೆ ಇದೆ.
ಬಳ್ಳಾರಿಯ ಲೋಕಾಯುಕ್ತ ಅಧಿಕಾರಿಗಳಿಂದ ನಡೆದ ಈ ದಾಳಿ ಸ್ಥಳೀಯವಾಗಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.





