ಬಳ್ಳಾರಿ: ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ವತಿಯಿಂದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕಾರ ಮತ್ತು ಅಹವಾಲು ಆಲಿಕೆಯು ಇಂದು(ಜೂ.09) ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಕಂಪ್ಲಿ ತಾಲೂಕಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ನಡೆಯಲಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಪಿ.ಎ.ಪುರುಷೋತ್ತಮ, ಉಪಾಧೀಕ್ಷಕ ಸಲಿಂ ಪಾಶಾ ನೇತೃತ್ವದಲ್ಲಿ ಅಹವಾಲು ಸ್ವೀಕಾರ ಜರುಗಲಿದೆ.
ಜನಸಂಪರ್ಕ ಸಭೆಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಜಾಗೃತಿ ಅರಿವು ಮೂಡಿಸಿ,ಭ್ರಷ್ಟಚಾರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಗುವುದು ಹಾಗೂ ಸಾಧ್ಯವಾದಲ್ಲಿ ಅಲ್ಲಿಯೇ ಬಗೆಹರಿಸುವುದು ಮತ್ತು ಸಾರ್ವಜನಿಕರಿಗೆ ತಮ್ಮ ತಮ್ಮ ಅರ್ಜಿಗಳ ವಿಚಾರಣೆ ಸಲುವಾಗಿ ಲೋಕಾಯುಕ್ತರಿಗೆ ಅರ್ಜಿ ಸಲ್ಲಿಸಲು ಫಾರಂ ನಂ.1 ಮತ್ತು 2ನ್ನು ನೀಡಲಾಗಿರುತ್ತದೆ.
ಆದ್ದರಿಂದ ಕುಂದು ಕೊರತೆಗಳಿರುವ ಸಾರ್ವಜನಿಕರು ನಿಗದಿಪಡಿಸಿದ ಸಮಯಕ್ಕೆ ಅರ್ಜಿಗಳನ್ನು ನೀಡಬಹುದು ಎಂದು ತಿಳಿಸಿದೆ.