ವಿಂಡ್ ಮಿಲ್ ರೆಕ್ಕೆ ಸಾಗಿಸುತ್ತಿದ್ದ ಲಾರಿ ಪಲ್ಟಿ


ಬೆಳಗಾಯಿತು ವಾರ್ತೆ| Www.belagayitu.in
ಮರಿಯಮ್ಮನಹಳ್ಳಿ: ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ–50ರ ಟನಲ್ (ಸುರಂಗ) ಸಮೀಪ ಪವನ ವಿದ್ಯುತ್ ಘಟಕಕ್ಕೆ (ವಿಂಡ್ ಮಿಲ್) ಬಳಸುವ ಬೃಹತ್ ಗಾತ್ರದ ಫ್ಯಾನ್ ರೆಕ್ಕೆಯನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯೇ ಪಲ್ಟಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಅಪಘಾತದ ತೀವ್ರತೆಗೆ ಬೃಹತ್ ವಿಂಡ್ ಮಿಲ್ ರೆಕ್ಕೆ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು. ಇದರಿಂದ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.
ನಗರದ ಕಡೆಯಿಂದ ಬೆಂಗಳೂರು, ದಾವಣಗೆರೆ ಸೇರಿದಂತೆ ವಿವಿಧ ಭಾಗಗಳಿಗೆ ತೆರಳುತ್ತಿದ್ದ ನೂರಾರು ವಾಹನಗಳು ಮಾರ್ಗ ಮಧ್ಯೆಯೇ ಸಿಲುಕಿಕೊಂಡಿದ್ದು, ಪ್ರಯಾಣಿಕರು ಹಲವು ಗಂಟೆಗಳ ಕಾಲ ಪರದಾಡುವಂತಾಯಿತು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ಕ್ರೇನ್‌ಗಳ ಸಹಾಯದಿಂದ ಪಲ್ಟಿಯಾದ ಲಾರಿ ಹಾಗೂ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ವಿಂಡ್ ಮಿಲ್ ರೆಕ್ಕೆಯನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಯಿತು.
ಸಂಚಾರ ದಟ್ಟಣೆ ನಿವಾರಣೆಗೆ ಪೊಲೀಸರು ಪರ್ಯಾಯ ಮಾರ್ಗಗಳಲ್ಲಿ ವಾಹನಗಳನ್ನು ಸಂಚರಿಸುವಂತೆ ವ್ಯವಸ್ಥೆ ಮಾಡಿದ್ದು, ಹೆದ್ದಾರಿಯಲ್ಲಿ ಸಂಚಾರವನ್ನು ಶೀಘ್ರದಲ್ಲೇ ಸಂಪೂರ್ಣವಾಗಿ ಪುನಃಸ್ಥಾಪಿಸಲು ಕ್ರಮ ಕೈಗೊಂಡಿದ್ದಾರೆ.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles