ರಾಜ್ಯದ ಹಲವೆಡೆ ಎಲ್‌ಪಿಜಿ ಕೊರತೆ, ಸಂಕಷ್ಟ

ಬೆಳಗಾಯಿತು ವಾರ್ತೆ | Www.belagayithu.in
ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದಿಂದಾಗಿ ಅನಿಲ ಪೂರೈಕೆಯಲ್ಲಿ ಅಡಚಣೆ ಉಂಟಾಗಬಹುದೆಂಬ ಆತಂಕದ ನಡುವೆ ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಹಲವಾರು ಗ್ಯಾಸ್ ಏಜೆನ್ಸಿಗಳಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ವಿಚಾರಣೆ ಹೆಚ್ಚಾಗಿದ್ದು, ಬುಧವಾರ ವಿತರಕರು ಸಾಕಷ್ಟು ಪ್ರಮಾಣದಲ್ಲಿ ಸ್ಟಾಕ್‌ ಇಲ್ಲ ಎಂದು ಹೇಳಿದ್ದಾರೆ.
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆಯಿದ್ದು, ನಗರದ ಹಲವಾರು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಎಲ್‌ಪಿಜಿ ಡೀಲರ್ ಪಿಟಿಐಗೆ ತಿಳಿಸಿದ್ದಾರೆ.
ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರು ತಮ್ಮಲ್ಲಿರುವ ಗ್ಯಾಸ್ ಸ್ಟಾಕ್ ಖಾಲಿಯಾದ ನಂತರ ಬಂದ್ ಮಾಡಬೇಕಾಗುತ್ತದೆ ಎಂದು ಪುನರುಚ್ಚರಿಸಿದ್ದಾರೆ.
ಈ ಮಧ್ಯೆ ಗೃಹಬಳಕೆ ಎಲ್‌ಪಿಜಿಯಲ್ಲೂ ಕೊರತೆ ಉಂಟಾಗಿದ್ದು, ಹಲವು ಗ್ರಾಹಕರು ಬುಕಿಂಗ್ ಗೆ ಯತ್ನಿಸಿದ್ದು, ಈ ವೇಳೆ ಬುಕಿಂಗ್ ನಂಬರ್ ಸ್ವಿಚ್ ಆಫ್ ಎಂದು ಬಂದಿದೆ. ಹೀಗಾಗಿ ಗ್ರಾಹಕರು ತೀವ್ರ ಆತಂಕಗೊಂಡಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles