ಬೆಳಗಾಯಿತು ವಾರ್ತೆ
ಬಳ್ಳಾರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಭಾಂಗಣದಲ್ಲಿ ಶುಕ್ರವಾರ ಆಚರಿಸಲಾಯಿತು.
ಸಂಸ್ಥೆಯ ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಅವ್ವಾರು ಮಂಜುನಾಥ್, ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು, ಹಿರಿಯ ಉಪಾಧ್ಯಕ್ಷ ಎಸ್. ದೊಡ್ಡನಗೌಡ, ಉಪಾಧ್ಯಕ್ಷರಾದ ಸೊಂತ ಗಿರಿಧರ ಹಾಗೂ ಪಿ. ಪಾಲಣ್ಣ, ಜಂಟಿ ಕಾರ್ಯದರ್ಶಿ ವಿ. ರಾಮಚಂದ್ರ, ಮಾಜಿ ಅಧ್ಯಕ್ಷ ಡಾ. ಡಿ.ಎಲ್. ರಮೇಶಗೋಪಾಲ್ ಸೇರಿದಂತೆ ವಿವಿಧ ಕಮಿಟಿಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಾಗಳ್ಳಿ ರಮೇಶ್, ವೇಣುಗೋಪಾಲ ಗುಪ್ತ, ಕೌಡಕಿ ಹನುಮೇಶಬಾಬು, ಬಿ. ಸುರೇಂದ್ರ ಕುಮಾರ ಬಫಾನ್ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು, ವಿವಿಧ ಕಮಿಟಿ ಚೇರ್ಮನ್‌ಗಳು, ವಿಶೇಷ ಆಹ್ವಾನಿತರು ಹಾಗೂ ವಿಶೇಷ ಸಮನ್ವಯ ಸಮಿತಿ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಗಾಂಧೀಜಿ ಮತ್ತು ಶಾಸ್ತ್ರಿಜೀ ಅವರಿಗೆ ಗೌರವ ಸಲ್ಲಿಸಿದರು.





