ನಗರದಲ್ಲಿ ಅದ್ಧೂರಿ ಮಹಾವೀರ ಜಯಂತಿ ಆಚರಣೆ

ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ನಗರದ ತೇರುಬೀದಿಯ ಶ್ರೀ ಪಾರ್ಶ್ವನಾಥ್ ಭವನದಲ್ಲಿ ಮಂಗಳವಾರ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು.
ಕಾರ್ಯಕ್ರಮಕ್ಕೂ ಮುನ್ನ ಭಗವಾನ್ ಮಹಾವೀರರ ಭಾವಚಿತ್ರದ ಅದ್ದೂರಿ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಭಾಗವಹಿಸಿದ ಭಕ್ತರು ಜಯಘೋಷಗಳೊಂದಿಗೆ ಸಂಭ್ರಮವನ್ನು ಹೆಚ್ಚಿಸಿದರು.
ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಹಾವೀರರ ಉಪದೇಶಗಳು, ಅಹಿಂಸಾ ತತ್ವ ಮತ್ತು ಮಾನವೀಯ ಮೌಲ್ಯಗಳ ಬಗ್ಗೆ ಮಾತನಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ನಗರ ಶಾಸಕ ಜಿ. ಸೋಮಶೇಖರ್ ರೆಡ್ಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಮೆರುಗು ತಂದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles