23.6 C
Bellary
Monday, February 3, 2025

Localpin

spot_img

ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಡಿಸಿ

ಬೆಳಗಾಯಿತು ವಾರ್ತೆ
ಬಳ್ಳಾರಿ: 76ನೇ ಸ್ವಾತಂತ್ರ್ಯೋತ್ಸವವನ್ನು ನಗರದ ಸುಧಾಕ್ರಾಸ್ ಬಳಿಯ ವಿಮ್ಸ್ ಮೈದಾನದಲ್ಲಿ ಅತ್ಯಂತ ಸಂಭ್ರಮದಿಂದ ಅಚರಿಸಲಾಗುವುದು. ಇದಕ್ಕೆ ಬೇಕಾದ ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸೂಚಿಸಿದರು.

ಈ ಬಾರಿಯ ಸ್ವಾತಂತ್ರ್ಯೋತ್ಸವ ದಿನ ಆಚರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ದಿನಾಚರಣೆದಂದು ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಪಥ ಸಂಚಲನ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ, ಧ್ವಜಾರೋಹಣ ಸಂದೇಶವನ್ನು ನೀಡಲಿದ್ದಾರೆ. ಬೇಕಾದ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ರಾಷ್ಟೀಯ ಹಬ್ಬಗಳ ಆಚರಣಾ ವಿವಿಧ ಸಮಿತಿಯ ಅಧಿಕಾರಿಗಳಿಗೆ ಸೂಚಿಸಿದರು.
ಅಂದು ಬೆಳಗ್ಗೆ 8ಕ್ಕೆ ನಗರದ ಎಚ್.ಆರ್.ಗವಿಯಪ್ಪ ವೃತ್ತದಲ್ಲಿ ಬೃಹತ್ ಧ್ವಜಸ್ತಂಭದ ರಾಷ್ಟ್ರಧ್ವಜಾರೋಹಣ, ನಂತರ ವಿಮ್ಸ್ ಆವರಣದಲ್ಲಿನ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ನಡೆಯಲಿದೆ. ಬಳಿಕ ವಿಮ್ಸ್ ಮೈದಾನದಲ್ಲಿ ಜಿಲ್ಲಾಡಳಿತದಿಂದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.
ಪೊಲೀಸ್ ಇಲಾಖೆಯು ಪರೇಡ್ ಸಿದ್ಧತೆಯನ್ನು ಮಾಡಿಕೊಳ್ಳಬೇಕು. ಶಾಲಾ ಮಕ್ಕಳು ಕೂಡ ಪರೇಡ್ ನಲ್ಲಿ ಭಾಗವಹಿಸುವವರಿಗೂ ತರಬೇತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಉಳಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳ ತಂಡಗಳಿಗೆ ಪೂರ್ವಭಾವಿ ತರಬೇತಿಯನ್ನು ನೀಡಿ ಸಜ್ಜುಗೊಳಿಸಬೇಕು ಎಂದು ತಿಳಿಸಿದರು.
ಎಲ್ಲ ಸರಕಾರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ಪ್ರತಿಯೊಂದು ಇಲಾಖೆಯವರು ತಮ್ಮ ಇಲಾಖೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ವಿಮ್ಸ್ ಮೈದಾನದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು.
ವಿಮ್ಸ್ ಮೈದಾನದಲ್ಲಿ ಸ್ವಾತಂತ್ರ್ಯ ಯೋಧರು, ಜನಪ್ರತಿನಿಧಿಗಳು, ಗಣ್ಯರು ಹಾಗೂ ಸಾರ್ವಜನಿಕರು ಸೇರಿದಂತೆ ಎಲ್ಲರಿಗೂ ಸಮರ್ಪಕವಾಗಿ ಆಸನ ವ್ಯವಸ್ಥೆಯನ್ನು ಕಲ್ಪಿಸಬೇಕು.
ಶಾಲಾ ಮಕ್ಕಳು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸ್ವಾತಂತ್ರ್ಯೋತ್ಸವ ಸಮಾರಂಭ ನಡೆಯುವ ವೇಳೆ ಅಗತ್ಯ ವೈದ್ಯಕೀಯ ವ್ಯವಸ್ಥೆಯನ್ನು ಮಾಡಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಸನ್ಮಾನ, ವಿಶೇಷ ಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಹಾಗೂ ಪಥ ಸಂಚಲನದಲ್ಲಿ ಉತ್ತಮ ಪ್ರದರ್ಶನದ ಅಂಗವಾಗಿ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದ್ದು, ಬೇಕಾದ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಟರಾಜ್, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಜಿಲ್ಲಾ ಖನಿಜ ಪ್ರತಿಷ್ಠಾನ ವಿಶೇಷಾಧಿಕಾರಿ ಪಿ.ಎಸ್.ಮಂಜುನಾಥ, ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles