ಬೆಳಗಾಯಿತು ವಾರ್ತೆ
ಮಸ್ಕಿ: ಗ್ರಾಮಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಪಡೆದುಕೊಳ್ಳಲು ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಮಸ್ಕಿ ತಹಶೀಲ್ದಾರ್ ಕವಿತಾ ಆರ್ ಅವರು ಕರೆ ನೀಡಿದರು.
ಜೂ.18ರಂದು ಮಸ್ಕಿ ತಾಲೂಕಿನ ಗೌಡನಬಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮಸ್ಥರ ಅಹವಾಲು ಆಲಿಸಲು ಹಾಗೂ ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿಕೊಡಲು ಬೆಳ್ಳಿಗನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಳಿಗ್ಗೆ 10 ಗಂಟೆಯಿAದ ಸಾಯಂಕಾಲ 5 ಗಂಟೆಯವರೆಗೆ ತಾಲೂಕ ಆಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ಮೂಲಕ ಜನರ ಅಹವಾಲುಗಳನ್ನು ಆಲಿಸುವ ಉದ್ದೇಶದಿಂದ ಸರಕಾರ ಈ ಕಾರ್ಯಕ್ರಮಕ್ಕೆ ಪುನಃ ಚಾಲನೆ ನೀಡಿದೆ, ಅದರಂತೆ ತಿಂಗಳ ಮೂರನೇ ಶನಿವಾರ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಕಲ್ಪಿಸಿಕೊಡಲಿದ್ದಾರೆ. ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ತಹಶೀಲ್ದಾರ್ ಕವಿತಾ ಆರ್ ತಿಳಿಸಿದ್ದಾರೆ.