ವಸತಿ ರಹಿತರ ಅರ್ಹ ಫಲಾನುಭವಿಗಳ ಪಟ್ಟಿ ಸೇರ್ಪಡೆಗೆ ಮೇ 15 ಕೊನೆಯ ದಿನ

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: 2018ರ ವಸತಿ ರಹಿತ ಮತ್ತು ನಿವೇಶನ ರಹಿತ ಸಮೀಕ್ಷೆಯ ಪಟ್ಟಿಯಲ್ಲಿ ಬಿಟ್ಟುಹೋಗಿರುವ ಅರ್ಹ ಫಲಾನುಭವಿಗಳನ್ನು ಸೇರಿಸಲು ಹಾಗೂ ಪರಿಷ್ಕರಿಸಲು ಮೇ 15 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾರೆ.
2018ರಲ್ಲಿ ನಡೆಸಲಾದ ಸಮೀಕ್ಷಾ ಪಟ್ಟಿಯನ್ನು ಪರಿಷ್ಕರಿಸಲು ಮತ್ತು ಅರ್ಹ ಕುಟುಂಬಗಳನ್ನು ಪಟ್ಟಿಗೆ ಸೇರಿಸಲು ಈಗ ಅವಕಾಶ ಕಲ್ಪಿಸಲಾಗಿದೆ. ಅರ್ಹ ಫಲಾನುಭವಿಗಳ ಹೆಸರನ್ನು ಸೇರಿಸಲು ಮೇ 15 ರವರೆಗೆ ಅಂತಿಮ ಕಾಲಾವಕಾಶ ನೀಡಲಾಗಿದೆ.
ಈ ನಿಗದಿತ ದಿನಾಂಕದ ನಂತರ ಯಾವುದೇ ಸೇರ್ಪಡೆಗೆ ಅವಕಾಶವಿರುವುದಿಲ್ಲ ಮತ್ತು ಅಂದೇ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು. ಮೇ 15ರ ನಂತರ ಸಿದ್ಧವಾಗುವ ಪಟ್ಟಿಯನ್ನೇ ಅಂತಿಮ ‘ವಸತಿ ಮತ್ತು ನಿವೇಶನ ರಹಿತರ ಪಟ್ಟಿ’ ಎಂದು ಪರಿಗಣಿಸಲಾಗುವುದು.
ಅರ್ಹ ಫಲಾನುಭವಿಗಳು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಥವಾ ಹೆಸರು ಸೇರ್ಪಡೆಗಾಗಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿ ಸಿಬ್ಬಂದಿಯನ್ನು ಕೂಡಲೇ ಸಂಪರ್ಕಿಸಬಹುದಾಗಿದೆ. ವಸತಿ ಸೌಲಭ್ಯದಿಂದ ವಂಚಿತರಾದ ಅರ್ಹ ಕುಟುಂಬಗಳು ಈ ಕೂಡಲೇ ಸಂಬAಧಪಟ್ಟ ದಾಖಲೆಗಳೊಂದಿಗೆ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಿ ತಮ್ಮ ಹೆಸರು ಪಟ್ಟಿಯಲ್ಲಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು.
ಅರ್ಹ ಫಲಾನುಭವಿಗಳನ್ನು ಕೈ ಬಿಟ್ಟಿದ್ದಲ್ಲಿ ಸಂಬAಧಿಸಿದ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles