ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಯುವ ವಿದ್ಯಾರ್ಥಿಗಳಿಗೆ ಆತ್ಮ ವಿಶ್ವಾಸವನ್ನು ಹೆಚ್ಚಿಸಿ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಉತ್ತಮ ವಾತಾವರಣದಲ್ಲಿ ಹೊಸ ವಿಷಯಗಳನ್ನು ಪ್ರಯತ್ನಿಸಲು ಹಾಗೂ ಮಕ್ಕಳ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಬಳ್ಳಾರಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮೇ.15 ರಿಂದ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಬಳ್ಳಾರಿ ನಗರದ ಪೂರ್ವ ಮತ್ತು ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ 7 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಬೇಸಿಗೆ ಶಿಬಿರದಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು ಏ.30ರೊಳಗಾಗಿ ಬಳ್ಳಾರಿ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನೊಂದಣಿ ಮಾಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 96067 13536ಗೆ ಸಂಪರ್ಕಿಸಬಹುದು ಎಂದು ವಿಜ್ಞಾನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.