ವೀರೇಶ್ ಮೇಲೆ ಹಲ್ಲೆ ಪ್ರಕರಣಮುಷ್ಕರಕ್ಕೆ ಹಿಂದಕ್ಕೆ ಪಡೆಯಲು ಮೇಯರ್ ಮನವಿ

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿರುವ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಈ ಹಿನ್ನೆಲೆಯಲ್ಲಿ ಮಹಾಪೌರರು ಹಾಗೂ ಕಾಂಗ್ರೆಸ್ ಮುಖಂಡರು ಮುಷ್ಕರ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪಾಲಿಕೆ ಸದಸ್ಯರು, ಮೌರ ಕಾರ್ಮಿಕರೊಂದಿಗೆ ಚರ್ಚೆ ನಡೆಸಿ ಮುಷ್ಕರ ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದರು.
ಈ ವೇಳೆ ಮಾತನಾಡಿದ ಮಹಾಪೌರರು, ಮುಷ್ಕರ ಮುಂದುವರಿದರೆ ಬಳ್ಳಾರಿ ನಗರದ ಜನತೆಗೆ ಹೆಚ್ಚಿನ ತೊಂದರೆ ಉಂಟಾಗುತ್ತದೆ. ಪ್ರಸ್ತುತ ಕುಡಿಯುವ ನೀರನ್ನು ಕಾಲುವೆಗೆ ಹರಿಸಲಾಗಿದ್ದು, ಅದನ್ನು ಸಂಗ್ರಹಿಸುವುದು ಅತ್ಯಂತ ಮುಖ್ಯವಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಅವರು ತಿಳಿಸಿದರು.
ಇದೇ ವೇಳೆ, ಎಇಇ ವೀರೇಶ್ ಅವರ ಪರವಾಗಿ ನಾವಿದ್ದೇವೆ. ನೌಕರರ ಎಲ್ಲಾ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಲು ತಾವು ಬದ್ಧರಾಗಿದ್ದೇವೆ. ನಗರ ಹಾಗೂ ಗ್ರಾಮೀಣ ಶಾಸಕರೊಂದಿಗೆ ಸಮಾಲೋಚನೆ ನಡೆಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.
ಘಟನೆಗೆ ಸಂಬಂಧಿಸಿದಂತೆ ಕುಬೇರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಮುಷ್ಕರವನ್ನು ಇಂದೇ ಅಂತ್ಯಗೊಳಿಸುವಂತೆ ಮಹಾಪೌರರು ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ನೌಕರರ ಸಂಘದ ಅಧ್ಯಕ್ಷ ಗೋವಿಂದ ಬಾಬು ಹಾಗೂ ಪದಾಧಿಕಾರಿಗಳು, ನೌಕರರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಮಹಾಪೌರರಿಗೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವಿಷ್ಣು ಬಾಯಿ, ವೆಂಕಟೇಶ್ ಹೆಗಡೆ, ಕೆ. ಶ್ರೀನಿವಾಸಲು, ಅಲುವೇಲು ಸುರೇಶ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles