ಬೆಳಗಾಯಿತು ವಾರ್ತೆ | Www.belagayithu.in
ಬಳ್ಳಾರಿ: ನಗರದ ಬಹು ನಿರೀಕ್ಷಿತ ವಸತಿ ಯೋಜನೆ ಆಗಿರುವ ಮಹಾತ್ಮ ಗಾಂಧಿ ಟೌನ್’ಶಿಪ್ ಯೋಜನೆಯ ಅನುಷ್ಠಾನದ ಕುರಿತು ಸಭೆ ನಿಗದಿಯಾಗಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.ಈ ಕುರಿತು ಅವರು ಗುರುವಾರ ಪತ್ರಿಕಾ ಹೇಳಿಕೆ ನೀಡಿದ್ದಾರೆ.ವಸತಿ ಇಲಾಖೆಯ ಅಡಿ ಬರುವ ಕೊಳಚೆ ಅಭಿವೃದ್ಧಿ ಮಂಡಳಿಯ ಕಚೇರಿಯಲ್ಲಿ ಗುರುವಾರ ರಾಜ್ಯದ ಎಲ್ಲಾ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ಇದೇ ವೇಳೆ ಬಳ್ಳಾರಿ ನಗರದ ಮಹಾತ್ಮ ಗಾಂಧಿ ಟೌನ್’ಶಿಪ್ ಯೋಜನೆಯ ಅನುಷ್ಠಾನದ ಕುರಿತು ಚರ್ಚೆ ನಡೆಸಲು ಅ.03 ರಂದು ಸಭೆ ನಡೆಸುವುದಾಗಿ ಸಚಿವ ಜಮೀರ್ ಅಹ್ಮದ್ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಜೆ.ಎನ್.ಗಣೇಶ್, ಶಾಸಕ ಪ್ರಸಾದ್ ಅಬ್ಬಯ್ಯ ಮತ್ತಿತರರು ಹಾಜರಿದ್ದರು.





