ಬೆಳಗಾಯಿತು ವಾರ್ತೆ
ಬಳ್ಳಾರಿ: ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡು ಹತಾಶ ಭಾವನೆಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಹೇಳಿಕೆ ಖಂಡಿನೀಯ. ಈ ಕೂಡಲೇ ಅವರನ್ನ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣ ಘಟಕದ ಬಳ್ಳಾರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಎಂ.ಜಿ ಕನಕ ಅವರು ಆಗ್ರಹಿಸಿದರು.
ನಗರದಲ್ಲಿ ಬುಧವಾರ ಪತ್ರಿಕಾ ಮಾಧ್ಯಮದವರೊಂದಿಗೆ ಎಂ.ಜಿ ಕನಕ ಅವರು ಮಾತನಾಡಿದ ಅವರು ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ರಾಜ್ಯದ ಜನರಿಗೆ ಅವಮಾನ ಮಾಡಿದ್ದಾರೆ. ಮರ ಗಿಡ ಅಂದ್ರೆ ಏನು ಗೊತ್ತಿಲ್ಲ ನೆರಳು ಅಂದ್ರೆ ಏನು ಗೊತ್ತಿಲ್ಲ ಸುಟ್ಟು ಕರ್ಕಲಾಗಿರುತ್ತಾರೆ ನಮ್ಮ ಖರ್ಗೆ ಅವರು ನೋಡಿದರೆ ಗೊತ್ತಾಗುತ್ತದೆ ತಲೆಕೂದಲ ಮುಚ್ಕೊಂಡಿರೋದಕ್ಕೆ ಸ್ವಲ್ಪ ಉಳಿದುಕೊಂಡಿರುವುದು ಅವೇ ನೆರಳು ಎಂದು ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ ಎಂದರು.
ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ್ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆ.
ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆಯವರನ್ನು ಅವಮಾನಿಸಿದ್ದಲ್ಲ, ಖರ್ಗೆಯವರ ಹೆಸರಲ್ಲಿ ಇಡೀ ಮೂಲನಿವಾಸಿ ದಲಿತರಿಗೆ ಮಾಡಿದ ಅವಮಾನ. ಬಿಜೆಪಿ ಪಕ್ಷದವರಿಗೆ ಉತ್ತರ ಕರ್ನಾಟಕದ ಜನರ ಬಗ್ಗೆ, ಕಪ್ಪುವರ್ಣದವರ ಬಗ್ಗೆ ನಿಜಕ್ಕೂ ಗೌರವ ಇದ್ದಿದ್ದೇ ಆದರೆ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರನ್ನು, ಅರಣ್ಯ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರನ್ನು ಹಾಗೂ ಉತ್ತರ ಕರ್ನಾಟಕದ ಜನತೆಯನ್ನು ಅತ್ಯಂತ ಕೀಳು ಅಭಿರುಚಿಯ ಮಾತುಗಳಿಂದ ಅವಮಾನಿಸುತ್ತಿರಲಿಲ್ಲ. ಬಿಜೆಪಿ ಪಕ್ಷದವರಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಜ್ಞಾನೇಂದ್ರರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಬೇಕು ಹಾಗೂ ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ್ ಖರ್ಗೆಯವರ ಹಾಗೂ ದಲಿತರ ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣ ಘಟಕದ ಬಳ್ಳಾರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಜಿ ಕನಕ ಅವರು ಪತ್ರಿಕ ಮಾಧ್ಯಮದವರಿಗೆ ಪ್ರತಿಕ್ರಿಸಿದರು.