ಕುಡಿಯುವ ನೀರಿನ ಸಮಸ್ಯೆಗೆ ಶಾಸಕರ ತಕ್ಷಣ ಸ್ಪಂದನೆ

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ನಗರದ 21 ಮತ್ತು 24ನೇ ವಾರ್ಡಿನ ಕಾಲುವೆ ಮೇಲಿನ ನಿವಾಸಿಗಳು ಕುಡಿಯುವ ನೀರಿನ ಸರಬರಾಜು ಸಮರ್ಪಕವಾಗಿ ಆಗುತ್ತಿಲ್ಲವೆಂದು ಶಾಸಕರಾದ ನಾರಾ ಭರತ್ ರೆಡ್ಡಿ ಅವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆಯನ್ನು ತಿಳಿಸಿದರು.
ನಿವಾಸಿಗಳ ಅಹವಾಲಿಗೆ ತಕ್ಷಣ ಸ್ಪಂದಿಸಿದ ಶಾಸಕರು, ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ನೇರವಾಗಿ ಕರೆ ಮಾಡಿ, ಸ್ಥಳೀಯರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಶಾಸಕರ ಸೂಚನೆ ಮೇರೆಗೆ ಶನಿವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಅಭಿಯಂತರ ಮಹೇಶ್, ಸಹಾಯಕ ಅಭಿಯಂತರ ವೀರೇಶ್, ಕಿರಿಯ ಅಭಿಯಂತರ ಶಿವಾನಂದ್ ಹಾಗೂ ವಾಟರ್ ಬೂಸ್ಟರ್ ಸಿಬ್ಬಂದಿ, ಸ್ಥಳೀಯ ಮುಖಂಡ ಎಚ್ ಎಸ್ ಹಿರೇಮಠ ಅವರೊಂದಿಗೆ ಸಮಸ್ಯೆಯನ್ನು ಆಲಿಸಿದರು. ಅಲ್ಲದೆ, ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಹೊಸ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸುವುದಾಗಿ ಭರವಸೆ ನೀಡಿದರು.
ಇದರಿಂದ ಸಂತೋಷಗೊಂಡ ನಿವಾಸಿಗಳು, ಶಾಸಕರ ತ್ವರಿತ ಕ್ರಮ ಮತ್ತು ಜನಪರ ಕಾಳಜಿಯನ್ನು ಮೆಚ್ಚಿ ಪ್ರಶಂಸಿಸಿದರು. ಸಮಸ್ಯೆ ತಿಳಿಸಿದ ಕೂಡಲೇ ಸ್ಪಂದಿಸಿದ ಶಾಸಕರ ಕಾರ್ಯಶೈಲಿಯನ್ನು ಕೊಂಡಾಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳಾದ ಶೇಖರ್, ಪರಶುರಾಮ್, ಸೋಮಪ್ಪ ಸೇರಿದಂತೆ ಅನೇಕ ಮಹಿಳೆಯರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles