ನವದೆಹಲಿ,ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕೊರೊನಾ ಎರಡನೇ ಲಸಿಕೆ ಹಾಕಿಸಿಕೊಂಡಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿರುವುದಾಗಿ ಸ್ವತಃ ಅವರೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಕೊರೊನಾ ಸೋಂಕು ನಿವಾರಿಸಲು ಇರುವ ಕೆಲವು ಮಾರ್ಗಗಳಲ್ಲಿ ಲಸಿಕೆ ತೆಗೆದುಕೊಳ್ಳುವುದು ಒಂದಾಗಿದೆ. ಮಾರ್ಚ್ 1ರಂದು ಮೋದಿ ಮೊದಲ ಕೊರೊನಾ ಲಸಿಕೆ ಪಡೆದುಕೊಂಡಿದ್ದರು. ಲಸಿಕಾ ಅಭಿಯಾನದ ಎರಡನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಮಾರ್ಚ್ 1ರಿಂದ ಲಸಿಕೆ ನೀಡಲು ಆರಂಭಿಸಿದ್ದು, ಅಂದೇ ಮೋದಿ ಲಸಿಕೆ ಪಡೆದುಕೊಂಡಿದ್ದರು.
ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ ಲಸಿಕೆ ತೆಗೆದುಕೊಂಡಿದ್ದರು. ಭಾರತವನ್ನು ಕೊವಿಡ್ 19 ಮುಕ್ತಗೊಳಿಸೋಣ, ಅರ್ಹರಾದ ಎಲ್ಲರೂ ಕೊರೊನಾ ಲಸಿಕೆ ಪಡೆದುಕೊಳ್ಳಿ ಎಂದು ಸಂದೇಶ ನೀಡಿದ್ದರು.