39.1 C
Bellary
Saturday, May 4, 2024

Localpin

spot_img

ಮೋದಿಯ ಸುಳ್ಳು ಭರವಸೆ ನಡೆಯಲ್ಲ

ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ಬರ ಪರಿಹಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದ್ದು, ಈ ಬಾರಿ ರಾಜ್ಯದಲ್ಲಿ ಕೇಂದ್ರದ ಸುಳ್ಳು ಭರವಸೆಗಳು ಕೆಲಸ ಮಾಡುವುದಿಲ್ಲ ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಅವರು ಹೇಳಿದರು.
ನಗರದ ಗಾಂಧಿನಗರದಲ್ಲಿ ಇರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಈ‌ ಬಾರಿ ನಡೆಯುವ ಲೋಕಸಭಾ ಚುನಾವಣೆ ದೇಶದ ಎರಡನೇ ಸ್ವಾತಂತ್ರ್ಯ ಸಂಗ್ರಾಮವಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ವೇಳೆ ಸಾರ್ವಜನಿಕರಿಗೆ ನೀಡಿದ್ದ ಎಲ್ಲ ಮೂಲ ಸೌಕರ್ಯಗಳನ್ನು ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಕಿತ್ತುಕೊಂಡಿದೆ. ಬಿಜೆಪಿ ಹಾಗೂ ಎನ್ ಡಿಎ ಕೂಟ ಭ್ರಷ್ಟರ ಕೂಟವಾಗಿದೆ. ಕಾಂಗ್ರೆಸ್ ಹಾಗೂ ಇಂಡಿಯಾ ಕೂಟ ವಚನಪಾಲಕರ‌ ಕೂಟವಾಗಿದೆ. ಆದ್ದರಿಂದಲೇ ಕಾಂಗ್ರೆಸ್ ಕರ್ನಾಟಕದಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ವಿಧಾನಸಭಾ ಚುನಾವಣೆಗೆ ಮುನ್ನ ಈಡೇರಿಸಿದೆ. ದೇಶದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಹಾಗೂ ಎನ್ ಡಿಎ ಕೂಟ ವಿರುದ್ಧದ ಗಾಳಿ‌ ಬೀಸುತ್ತಿದೆ. ರಾಜ್ಯದಲ್ಲಿ ಕನಿಷ್ಠ ಇಪ್ಪತ್ತು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಸೋಲಿನ‌ ಹತಾಶೆಯಿಂದ ಮಹಿಳೆಯರ ಮಂಗಳ ಸೂತ್ರದ ಬಗ್ಗೆ ಮಾತನಾಡುತ್ತಿದ್ದಾರೆ. ಮಂಗಳ ಸೂತ್ರದ ಬಗ್ಗೆ‌ ಮಾತನಾಡಿ ದೇಶದ ಪರಂಪರೆಯನ್ನು ಹಾಳು‌‌ ಮಾಡಿದ್ದಾರೆ. ಜೊತೆಗೆ ರಾಜ್ಯದ ಜನರಿಗೆ ಸುಳ್ಳು ಭರವಸೆಯನ್ನು ನೀಡುತ್ತಿದ್ದಾರೆ. ಅವರು ಹಿಂದೆ ನೀಡಿದ ಭರವಸೆಗಳಲ್ಲಿ ಒಂದನ್ನು ಈಡೇರಿಸಿಲ್ಲ ಇನ್ನೂ ಮುಂದೆ ಈಡೇರಿಸುತ್ತಾರಾ ಎಂದು ಪ್ರಶ್ನಿಸಿದರು.
ಮೋದಿ ಮತ್ತು ಅವರ ಟೀಂ ರಾಷ್ಟ್ರ ರಕ್ಷಣೆಯ ಬಗ್ಗೆ ಮಾತನಾಡುವವರು ರಾಷ್ಟ್ರಕ್ಕಾಗಿ ಏನೂ ಮಾಡಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದಾಗಲೇಲ್ಲಾ ರಾಜ್ಯ ಮತ್ತು ರಾಷ್ಟ್ರದಲ್ಲಿ ಕೋಮುಗಲಬೆ, ಜಾತಿ, ಧರ್ಮದದ ಹೆಸರಲ್ಲೆ ರಾಜಕಾರಣ ಮಾಡುತ್ತಾರೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ‌ ಪ್ರಶಾಂತ, ಮುಖಂಡರಾದ ಕಲ್ಲುಕಂಭ ಪಂಪಾಪತಿ, ವೆಂಕಟೇಶ ಹೆಗಡೆ, ಪಿ. ಗಾದೆಪ್ಪ, ಚಿದಾನಂದ, ಲೋಕೇಶ್, ಬಿ.ಎಮ್ ಪಾಟೀಲ್ ಇದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles