ತಿರುವನಂತಪುರA: ಇತ್ತೀಚೆಗೆ ವಿದೇಶದಿಂದ ಹಿಂದಿರುಗಿದ ಕೇರಳದ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ವ್ಯಕ್ತಿಯ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ರಾಷ್ಟಿçÃಯ ವೈರಾಲಜಿ ಸಂಸ್ಥೆಗೆ (ಎನ್‌ಐವಿ) ಕಳುಹಿಸಲಾಗಿತ್ತು. ಪರೀಕ್ಷೆಯ ಫಲಿತಾಂಶ ಬಂದ ನಂತರ ಮಂಗನ ಕಾಯಿಲೆ ಇರುವುದು ದೃಢಪಟ್ಟಿದೆ ಎಂದು ಹೇಳಿದರು. ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸದೆ, ವ್ಯಕ್ತಿಯಲ್ಲಿ ವೈರಸ್‌ನ ಲಕ್ಷಣಗಳು ಕಂಡು ಬಂದಿದೆ ಮತ್ತು ವಿದೇಶದಲ್ಲಿರುವ ಮಂಕಿಪಾಕ್ಸ್ ರೋಗಿಯೊಂದಿಗೆ ನಿಕಟ ಸಂಪರ್ಕದಲ್ಲಿದ್ದರು ಎಂದು ಜಾರ್ಜ್ ಹೇಳಿದರು. ಇತ್ತೀಚೆಗಷ್ಟೇ ಕೋಲ್ಕತ್ತಾದ ಆಸ್ಪತ್ರೆಗೆ ವ್ಯಕ್ತಿಯೊಬ್ಬರು ಮಂಗನ ಕಾಯಿಲೆಯ ಲಕ್ಷಣಗಳೊಂದಿಗೆ ದಾಖಲಾಗಿದ್ದರು.
ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಮಂಕಿಪಾಕ್ಸ್ ಒಂದು ವೈರಲ್ ಝೂನೊಸಿಸ್ (ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್) ಆಗಿದ್ದು, ಸಿಡುಬು ರೋಗಿಗಳಲ್ಲಿ ಕಂಡುಬರುವ ರೋಗಲಕ್ಷಣಗಳನ್ನು ಹೋಲುತ್ತದೆ, ಆದರೂ ಇದು ಪ್ರಾಯೋಗಿಕವಾಗಿ ಕಡಿಮೆ ತೀವ್ರತೆ ಹೊಂದಿದೆ.