ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದ ಈ.ತುಕಾರಾಮ್

ಬೆಳಗಾಯಿತು ವಾರ್ತೆ
ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ. ತುಕಾರಾಮ್ ಅವರು ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರಿಂದ ಅವರ ಕುಂದುಕೊರತೆ ಮತ್ತು ಅಹವಾಲುಗಳನ್ನು ಜಿಪಂ ಆವರಣದಲ್ಲಿ ಗುರುವಾರ ಸ್ವೀಕರಿಸಿದರು.
ಮೂಲಭೂತ ಸೌಕರ್ಯಗಳಾದ ವಸತಿ ಯೋಜನೆಗಳು ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳ ಕುರಿತು ಸಾರ್ವಜನಿಕರು ಈ ಸಂದರ್ಭದಲ್ಲಿ ಸಂಸದರ ಗಮನಕ್ಕೆ ತಂದರು. ಸಾರ್ವಜನಿಕರು ಸಲ್ಲಿಸಿದ ವಿವಿಧ ಮನವಿ ಪತ್ರಗಳನ್ನು ಪರಿಶೀಲಿಸಿದ ಸಂಸದರು, ಸಮಸ್ಯೆಗಳನ್ನು ಆಲಿಸಿದರು.
ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಸಂಸದ ಈ. ತುಕಾರಾಮ್ ಅವರು, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ತಲುಪುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಗಮನಕ್ಕೆ ತರಬೇಕಾದ ವಿಷಯಗಳು ಹಾಗೂ ವಿವಿಧ ಸಮಸ್ಯೆಗಳ ಕುರಿತು ಸಭೆಯ ಮೂಲಕ ಮಾಹಿತಿ ನೀಡಿದರೆ, ಅವುಗಳನ್ನು ಸಂಸತ್‌ನಲ್ಲಿ ಪ್ರಸ್ತಾಪಿಸಿ ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್. ಬಸವರಾಜ, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ್, ಸಹಾಯಕ ಆಯುಕ್ತ ರಾಜೇಶ್.ಹೆಚ್.ಡಿ., ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles