ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ಶ್ರೀರಾಂಪುರ ಕಾಲೋನಿಯಲ್ಲಿ ಒಡಾಡುವ ರಸ್ತೆ ಮಣ್ಣಿನಿಂದ ಕುಡಿದ್ದು, ಮಳೆ ಬಂದರೆರೋಡು ಕೆಸರುಗದ್ದೆಯಂತಾಗಿ ಸಾರ್ವಜನಿಕರಿಗೆ ಒಡಾಡಲು ತೊಂದರೆಯಾಗುತ್ತಿದೆ.
ಕೆಲವು ತಿಂಗಳ ಹಿಂದೆ ಇಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಮಾಡಲಾಗಿತ್ತು. ಆದರೆ ಇನ್ನೂವರೆಗೂ ಕಾಮಗಾರಿ ಪ್ರಾರಂಭವಾಗದೆ ನೆನೆಗುದಿಗೆ ಬಿದ್ದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಹಾಗೂ ಶಾಸಕರು ಇತ್ತ ಗಮನ ಹರಿಸಿ ಕಾಮಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳಬೇಕು ಎಂಬುದು ಶ್ರೀರಾಂಪುರ ಕಾಲೋನಿಯ ಜನರು ಆಗ್ರಹಿಸಿದ್ದಾರೆ.