ಹಿರಿಯೂರು : ಮನುಷ್ಯನ ಜೀವನದಲ್ಲಿ ಸಂಗೀತವು ಮನಸ್ಸನ್ನು ಉಲ್ಲಾಸಗೊಳಿಸುವ ಒಂದು ದಿವ್ಯ ಔಷಧಿಯಾಗಿದ್ದು,
ವಿದ್ಯಾರ್ಥಿಗಳು ಸಂಗೀತವನ್ನು ಹೆಚ್ಚು ಹೆಚ್ಚು ಅಭ್ಯಾಸ ಮಾಡುವ ಮೂಲಕ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು
ಎಂಬುದಾಗಿ ನಗರಸಭೆ ಅಧ್ಯಕ್ಷೆಯಾದ ಶ್ರೀಮತಿ ಶಂಷುನ್ನೀಸಾ ಹೇಳಿದರು.
ನಗರದ ಶ್ರೀ ತೇರುಮಲ್ಲೇಶ್ವರ ದೇವಸ್ಥಾನದ ಆವರಣದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು ಹಾಗೂ ಶ್ರೀ ಏಕನಾಥೇಶ್ವರಿ ಸಂಗೀತ ವಿದ್ಯಾಲಯ ಹಿರಿಯೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಸಂಗೀತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಡಾ.ಕರಿಯಪ್ಪ ಮಾಳಿಗೆ ಮಾತನಾಡಿ, ಸಂಗೀತ ಹಾಡುವುದರಿಂದ ಹಾಗೂ ಆಲಿಸುವುದರಿಂದ ಮನಸ್ಸಿಗೆ ಸಂತಸ ನೀಡುತ್ತದೆ, ಈ ನಿಟ್ಟಿನಲ್ಲಿ ಇಂದಿನ ಮಕ್ಕಳು ಸಂಗೀತ ಕಲಿಯುವುದರಿಂದ ಉತ್ತಮ ಸಂಸ್ಕಾರವಂತರಾಗಿ ಹೊರಹೊಮ್ಮುತ್ತಾರೆ ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಜನಪದ ಪರಿಷತ್ ಅಧ್ಯಕ್ಷರಾದ ಡಾಕ್ಟರ್ ಕರಿಯಪ್ಪ ಮಾಳಿಗೆ, ನಗರಸಭಾ ಸದಸ್ಯರುಗಳಾದ ರತ್ನಮ್ಮ, ಕವಿತಾ, ಪ್ರಾಂಶುಪಾಲರಾದ ಆರ್.ತಿಪ್ಪೇಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ಮಹಾಸ್ವಾಮಿ ಇತರರು ಉಪಸ್ಥಿತರಿದ್ದರು.