ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

ಬೆಳಗಾಯಿತು ವಾರ್ತೆ

ಬಳ್ಳಾರಿ: ನಗರದ ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯದಲ್ಲಿ ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ ವಿಭಾಗಗಳ ಸಹಯೋಗದಲ್ಲಿ “Frontier’s In Agriculture, Medical and Environmental Sciences (FAMES-2K25)” ಎಂಬ ವಿಷಯವನ್ನು ಕುರಿತು ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಕಾತ್ಯಾಯಿನಿ ಎಂ. ಮರಿದೇವಯ್ಯ ರವರು ವಹಿಸಿಕೊಂಡಿದ್ದರು. ಕಾರ್ಯಕ್ರಮವನ್ನು ನಾಡಗೀತೆ ಹಾಡುವುದರ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಶಶಿಧರ ಬಿ.ಎಸ್. ಪ್ರಧಾನ ವಿಜ್ಞಾನಿ ಮತ್ತು ಪ್ರಾಧ್ಯಾಪಕರು, ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದೂಪಂ ಸತೀಶ, ಡಾ. ಶ್ರೀನಿವಾಸ ನಾಯಕ, ಸಹ ಪ್ರಾಧ್ಯಾಪಕರು, ಡಾ.ನಾಗಭೂಷಣ ವಿ ಚರಂತಿಮಠ, ಸಹಪ್ರಾಧ್ಯಾಪಕರು, ನಿವೃತ್ತ ಪ್ರಾಧ್ಯಾಪಕರಾದ ಡಾ. ನಾಡಗೌಡ , ಪ್ರಭಯ್ಯ , ಐಕ್ಯೂಎಸಿ ಸಂಯೋಜಕರಾದ ಡಾ. ಸಯಿದ ಕೆ. ತನ್ವೀರ್ ಫಾತೀಮ ಅವರು ಹಾಗೂ ಸಹ ಸಂಯೋಜಕರಾದ ಡಾ. ಭೀಮನಗೌಡ ಎನ್. ಪಾಟೀಲ್ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles