28.7 C
Bellary
Friday, May 17, 2024

Localpin

spot_img

ಬಳ್ಳಾರಿಯಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಣೆ

ಬೆಳಗಾಯಿತು ವಾರ್ತೆ

ಬಳ್ಳಾರಿ: ಮತದಾನವು ಭಾರತ ಸಂವಿಧಾನ ನೀಡಿರುವ ಹಕ್ಕಾಗಿದ್ದು, ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಹೇಳಿದರು.
ಭಾರತ ಚುನಾವಣಾ ಆಯೋಗ, ಜಿಲ್ಲಾ ಚುನಾವಣಾ ಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ “ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಘೋಷವಾಕ್ಯದಡಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿ.ಡಿ.ಎ.ಎ ಫುಟ್‍ಬಾಲ್ ಮೈದಾನದ ಸಭಾಂಗಣ ದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮತದಾನವು ನಮ್ಮ ನಾಗರಿಕ ಜವಾಬ್ದಾರಿಯಾಗಿದೆ. ಗಣರಾಜ್ಯದ ಭವಿಷ್ಯ ಯುವ ಮತದಾರರ ಕೈಯಲ್ಲಿದೆ. ಯುವಕರು ಹಕ್ಕು ಭಾದ್ಯತೆಗಳನ್ನು ಅಳವಡಿಸಿಕೊಂಡು, ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗದೇ ಯೋಗ್ಯ ಅಭ್ಯರ್ಥಿಗಳ ಮೌಲ್ಯಮಾಪನ ಮಾಡಿ ಮತ ಚಲಾಯಿಸ ಬೇಕು ಎಂದರು.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಶೇಕಡವಾರು ಮತದಾನ ಪ್ರಮಾಣ ಹೆಚ್ಚಿಸಲು, ಯಾರು ಕೂಡ ಮತದಾನದಿಂದ ವಿಮುಖರಾ ಗದೇ ಕಡ್ಡಾಯವಾಗಿ ಮತಚಲಾಯಿಸಬೇಕು ಎಂದರು.
ಪ್ರತಿ ವರ್ಷದ ಥೀಮ್ ಅನ್ನು ಮತದಾರಿಗೆ ಅರ್ಪಿಸ ಲಾಗುತ್ತದೆ. ಎನ್‍ವಿಡಿ 2024ರ ಥೀಮ್ ‘ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತ ಚಲಾಯಿಸುತ್ತೇನೆʼ ಎಂಬುದಾಗಿದೆ. 18 ವರ್ಷ ತುಂಬಿದ ಯುವಕ ಯುವತಿಯರು ಮತದಾನದ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನಿ ಅವರು ಮಾತನಾಡಿ, 2011ರ ಜನವರಿ 25 ರಂದು ಮೊದಲ ಬಾರಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು. ಹೆಚ್ಚು ಹೆಚ್ಚು ಯುವ ಮತದಾರರನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಉತ್ತೇಜಿಸಲು ಮತದಾನ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟರು.
18 ವರ್ಷ ತುಂಬಿದ ಹೊಸ ಮತದಾರರು ಮತದಾರರ ಪಟ್ಟಿ ತಮ್ಮ ಹೆಸರು ನೋಂದಾಯಿಸಲು ನಿರಾಸಕ್ತಿ ತೋರಬಾರದು. ದೇಶದ ಅಭಿವೃದ್ಧಿ ಚಿತ್ರಣದಲ್ಲಿ ಮತದಾನ ಅತ್ಯಮೂಲ್ಯವಾಗಿದೆ ಎಂದರು.
ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಹೇಮಂತ್.ಎನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎನ್.ನವೀನ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ತಹಶೀಲ್ದಾರ ಗುರುರಾಜ ಸೇರಿದಂತೆ ಚುನಾವಣಾ ತಹಶೀಲ್ದಾರರು, ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಸಿಬ್ಬಂದಿ ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles