ಬೆಂಗಳೂರು: ಬಿಜೆಪಿ ಹಾಗೂ ಅದರ ಮೈತ್ರಿಕೂಟದ ರಾಷ್ಟçಪತಿ ಹುದ್ದೆಗೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಇಂದು ಬೆಂಗಳೂರಿಗೆ ಆಗಮಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದ್ರೌಪದಿ ಮುರ್ಮು ಅವರನ್ನು ಆತ್ಮೀಯವಾಗಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ನಗರಭಿವೃದ್ಧಿ ಸಚಿ ಬಸವರಾಜ್ ಬೈರತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟಿçÃಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬೆಂಬಲ ಕೋರಿದರು.
ದೇವೇಗೌಡರು, ಶ್ರೀಮತಿ ಚನ್ನಮ್ಮ ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ, ರೇವಣ್ಣ ಅವರು ಸೇರಿ ಇಡೀ ಕುಟುಂಬದ ಸದಸ್ಯರೆಲ್ಲರೂ ಶ್ರೀಮತಿ ಮುರ್ಮು ಅವರಿಗೆ ಆತಿಥ್ಯ ನೀಡಿ ಆತ್ಮೀಯವಾಗಿ ಗೌರವಿಸಿದರು. ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿರವರು,“ಶ್ರೀಮತಿ ದ್ರೌಪದಿ ಮುರ್ಮು ಅವರು ರಾಷ್ಟçಪತಿ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ದೇವೇಗೌಡರಿಗೆ ಮನವಿ ಮಾಡಿದರು. ಸಂಸದೀಯ ಮಂಡಳಿ ಸಭೆ ನಡೆಸಿ ತಮ್ಮ ಅಭಿಪ್ರಾಯ ತಿಳಿಸುವುದಾಗಿ ದೇವೆಗೌಡರು ತಿಳಿಸಿದರು. ಶೀಘ್ರದಲ್ಲೆ ಸಭೆ ಕರೆದು ಈ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.
ಇನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರದ ಇನ್ನೋರ್ವ ಸಚಿವ ಕಿಶನ್ ರೆಡ್ಡಿ, ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತಿತ್ತರರು ದ್ರೌಪದಿ ಮುರ್ಮು ಅವರ ಜೊತೆ ಉಪಸ್ಥಿತರಿದ್ದರು.