ಬೆಳಗಾಯಿತು ವಾರ್ತೆ
ಬಳ್ಳಾರಿ: ತಾಲ್ಲೂಕಿನ ಪಿಡಿ ಹಳ್ಳಿ ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಆಗಿ ಶಾಂತಮೂರ್ತಿ ಅವರು ಬುಧವಾರ ಆಗಮಿಸಿ ಅಧಿಕಾರ ವಹಿಸಿಕೊಂಡರು.
ಈ ಹಿಂದೆ ಪಿಡಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಮ್ಮಾರೆಡ್ಡಿ ಅವರು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ, ಕುಡುತಿನಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಾಂತಮೂರ್ತಿ ಅವರನ್ನು ಪಿಡಿ ಹಳ್ಳಿ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಅಧಿಕಾರ ವಹಿಸಿಕೊಂಡ ಬಳಿಕ ಪಿಎಸ್ಐ ಶಾಂತಮೂರ್ತಿ ಅವರು ಚೆಳ್ಳಗುರ್ಕಿಯ ಶ್ರೀ ಎರ್ರಿತಾತ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ತಾತನ ದರ್ಶನ ಪಡೆದರು.




