ಬೆಳಗಾಯಿತು ವಾರ್ತೆ
ಬಳ್ಳಾರಿ : ಲೋಕೋಪಯೋಗಿ ಇಲಾಖೆಯ ವತಿಯಿಂದ ಬಲ್ಳಾರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿವಿಐಪಿ ಗೆಸ್ಟ್ ಹೌಸ್ ಉದ್ಘಾಟನೆಯನ್ನು ಗುರುವಾರ ಲೋಕೋಪಯೋಗಿ ಇಲಾಖೆ ಸಚಿವರಾದ ಸಿ.ಸಿ.ಪಾಟೀಲ್ ಅವರು ಉದ್ಘಾಟಿಸಿದರು.
ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರಕಾರಿ ಅತಿಥಿಗೃಹದ ಆವರಣದಲ್ಲಿ ವಿವಿಐಪಿ ಗೆಸ್ಟ್ ಹೌಸ್ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಘನಉಪಸ್ಥಿತಿ ವಹಿಸಿದ್ದರು.ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಅವರು ಅಧ್ಯಕ್ಷತೆ ವಹಿಸಿದ್ದರು.
ಸಂಸದರಾದ ವೈ.ದೇವೇಂದ್ರಪ್ಪ, ಡಾ.ಸೈಯದ್ ನಾಸೀರ್ ಹುಸೇನ್,ಶಾಸಕರಾದ ಈ.ತುಕಾರಾಂ,ಬಿ.ನಾಗೇಂದ್ರ, ವೈ.ಎಂ.ಸತೀಶ್, ಮಾಜಿ ಸಂಸದೆ ಜೆ.ಶಾಂತ, ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗುತ್ತಿಗನೂರು ವಿರುಪಾಕ್ಷಗೌಡ, ಬುಡಾ ಅಧ್ಯಕ್ಷ ಪಾಲನ್ನ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಗಳಾದ ಡಾ.ಕೆ.ಎಸ್.ಕೃಷ್ಣಾರೆಡ್ಡಿ, ಸಂಪರ್ಕ ಮತ್ತು ಕಟ್ಟಡಗಳು(ಈ) ಮುಖ್ಯ ಎಂಜನಿಯರ್ ಜಗನ್ನಾಥ ಹಲಿಂಗೆ, ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ,ಎಸ್ಪಿ ಸೈದುಲು ಅಡಾವತ್, ಜಿಪಂ ಸಿಇಒ ಜಿ.ಲಿಂಗಮೂರ್ತಿ, ಮಹಾನಗರ ಪಾಲಿಕೆ ಆಯುಕ್ತರಾದ ಎಸ್.ಎನ್.ರುದ್ರೇಶ್, ಬಳ್ಳಾರಿ ವೃತ್ತದ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರ ಎಂ.ಎಸ್.ಮಲ್ಲಿಕಾರ್ಜುನ ಸೇರಿದಂತೆ ಇತರರು ಇದ್ದರು.