9.2 C
New York
Friday, March 31, 2023

Buy now

spot_img

ಪದವಿ ಕಾಲೇಜು ಆರಂಭ ಸದ್ಯಕ್ಕಿಲ್ಲ: ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು, – ರಾಜ್ಯದಲ್ಲಿ ಪದವಿ ಕಾಲೇಜುಗಳ ತರಗತಿಗಳ ಆರಂಭದ ಬಗ್ಗೆ ಸದ್ಯ ಯಾವುದೇ ತೀರ್ಮಾನ ವಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ .
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು , ‘ಸದ್ಯಕ್ಕೆ ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವುದು ಮಾತ್ರ ಸರಕಾರದ ಆದ್ಯತೆಯಾಗಿದೆ ಎಂದು ಹೇಳಿದರು ತೆ. ಅದರ ಹೊರತಾಗಿ ಕಾಲೇಜುಗಳನ್ನು ಆರಂಭಿಸುವುದಲ್ಲ.ಕೊರೋನ ಇನ್ನೂ ಪೂರ್ಣವಾಗಿ ನಿವಾರಣೆ ಆಗದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಯಾವುದೇ ತೀರ್ಮಾನಕ್ಕೆ ಬರಲಾಗಿಲ್ಲ ಎಂದರು.
ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿದ್ದ ಹಿನ್ನೆಲೆಯಲ್ಲಿ ಶಾಲಾ- ಕಾಲೇಜು ಬಂದ್ ಆಗಿತ್ತು, ಕೊರೊನಾ ಇಳಿಕೆ ಬಳಿಕ ಕೆಲವು ಚಟುವಟಿಕೆಗಳಿಗೆ ಅವಕಾಶ ನೀಡಿದ್ದರೂ ಶಾಲಾ ಕಾಲೇಜು ತೆರೆಯುವ ಬಗ್ಗೆ ಮಾತ್ರ ಇನ್ನೂ ಹಸಿರು ನಿಶಾನೆತೋರಿಲ್ಲ .

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,753FollowersFollow
0SubscribersSubscribe
- Advertisement -spot_img

Latest Articles