ಬೆಂಗಳೂರು- ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿಯವರ ಜನ್ಮದಿನದ ಅಂಗವಾಗಿ ಪ್ರದೇಶ ಕಾಂಗ್ರೆಸ್ ಏಕತಾ ಸೈಕಲ್ ಜಾಥಾ ಹಮ್ಮಿಕೊಂಡಿದೆ.
ಆಗಸ್ಟ್ 20 ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನ. ಇದರ ಅಂಗವಾಗಿ ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶೇಷಾದ್ರಿಪುರಂ ರಾಜೀವ್ ಗಾಂಧಿ ಪ್ರತಿಮೆ ಬಳಿ ಏಕತಾ ಸೈಕಲ್ ಜಾಥಾಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಮವಾರ ಚಾಲನೆ ನೀಡಿದರು