ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ಪ್ರಧಾನಿಮಂತ್ರಿಗಳಾದ ನರೇಂದ್ರ ಮೋದಿ ಅವರು ಇಂದು, ಬಳ್ಳಾರಿ ರೈಲ್ವೇ ನಿಲ್ದಾಣದಲ್ಲಿನ ನೂತನ “ಒಂದು ನಿಲ್ದಾಣ, ಒಂದು ಉತ್ಪನ್ನ” ಮಳಿಗೆಗೆ ವಿಡಿಯೋ ವರ್ಚುಯಲ್ ಮೂಲಕ ಚಾಲನೆ ನೀಡಿದರು.
ಸ್ಥಳೀಯ ಮಾರುಕಟ್ಟೆಯ ಉತ್ಪನ್ನಗಳಿಗೆ ಉತ್ತೇಜನ ನೀಡಲು ಬಳ್ಳಾರಿಯ ರೈಲ್ವೆ ನಿಲ್ದಾಣದಲ್ಲಿನ ‘ಒಂದು ನಿಲ್ದಾಣ, ಒಂದು ಉತ್ಪನ್ನ’ ಸ್ಟಾಲ್, ಟ್ರಾಲಿಗಳ ಲೋಕಾರ್ಪಣೆಗೊಳಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೈಲ್ವೇ ಇಲಾಖೆಯ ಸುಮಾರು 85 ಸಾವಿರ ಕೋಟಿ ರೂ. ಅಧಿಕ ಮೊತ್ತದ ವಿವಿಧ ರೈಲ್ವೆ ಯೋಜನೆಗಳ ಶಂಕುಸ್ಥಾಪನೆ, ಲೋಕಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ 10 ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಯೋಜನೆಗಳಿಗೆ ಚಾಲನೆ ನೀಡಿದರು.
ಬಳ್ಳಾರಿಯ ರೈಲ್ವೆ ನಿಲ್ದಾಣದಲ್ಲಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಬಿ.ಶ್ವೇತ ಅವರು ಭಾಗವಹಿಸಿ ಮಾತನಾಡಿದರು ಕೇಂದ್ರ ಸರ್ಕಾರದ ರೈಲ್ವೆ ಸಚಿವಾಲಯವು ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡುವ ದೃಷ್ಟಿಕೋನವನ್ನು ಹೊಂದಿದೆ. ಉತ್ಪನ್ನಗಳ ಮಾರಾಟ ಮಾಡಲು ಮಳಿಗೆ ಒದಗಿಸುವ ನಿಟ್ಟಿನಲ್ಲಿ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಮಳಿಗೆಯನ್ನು ಬಳ್ಳಾರಿ ನಿಲ್ದಾಣದಲ್ಲಿ ನೂತನವಾಗಿ ಆರಂಭಿಸಲಾಗಿದ್ದು, ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.