ಬಳ್ಳಾರಿ: ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಹಾಗೂ ಪಕ್ಷದ ಮುಖಂಡರ ಮತ್ತು ಕಾರ್ಯಕರ್ತರ ಅನುಕೂಲಕ್ಕಾಗಿ ಮಹಾನಗರ ಪಾಲಿಕೆಯಲ್ಲಿ ಇದೇ ಮೊದಲ ಬಾರಿಗೆ ಪಾಲಿಕೆ ವಿರೋಧ ಪಕ್ಷದ ನಾಯಕ ಹಾಗೂ ಪಾಲಿಕೆ ಸದಸ್ಯರಾದ ಸಿ. ಇಬ್ರಾಹಿಂ ಬಾಬು ಅವರು ಅಧಿಕೃತ ಕಚೇರಿ ಆರಂಭಿಸಿದ್ದಾರೆ.
ನಗರದ ಮಹಾನಗರ ಪಾಲಿಕೆಯಲ್ಲಿ ಬುಧವಾರ ಪಾಲಿಕೆಯ ಬಿಜೆಪಿಯ ವಿರೋಧ ಪಕ್ಷದ ನಾಯಕ ಸಿ.ಇಬ್ರಾಹಿಂ ಅವರು ಮಾಜಿ ಶಾಸಕ ಸೋಮಶೇಖರ ರೆಡ್ಡಿ ಅವರ ನೇತೃತ್ವದಲ್ಲಿ ಅಧಿಕೃತ ಕಚೇರಿಗೆ ಪೂಜೆ ಮಾಡಿ ಮಂಗಳವಾರ ಉದ್ಘಾಟಿಸಲಾಯಿತು.
ಪಾಲಿಕೆಯ ವಿರೋಧ ಪಕ್ಷದ ನಾಯಕ ಸಿ.ಇಬ್ರಾಹಿಂ ಅವರನ್ನು ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಹೂ ಗುಚ್ಛ ನೀಡಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ಹಿರಿಯ ಮುಖಂಡರು ಮತ್ತಿತರ ಉಪಸ್ಥಿತರಿದ್ದರು.