ಲಾರಿ ಹರಿದು 50ಕ್ಕೂ ಹೆಚ್ಚು ಕುರಿಗಳ ಸಾವು18ಕ್ಕೂ ಅಧಿಕ ಕುರಿಗಳಿಗೆ ಗಾಯ; ಕುರಿಗಾಹಿಗೆ ಭಾರೀ ನಷ್ಟ

ಬೆಳಗಾಯಿತು ವಾರ್ತೆ
ಬಳ್ಳಾರಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿಯೊಂದು ಕುರಿಗಳ ಹಿಂಡಿನ ಮೇಲೆ ಹರಿದ ಪರಿಣಾಮ 50ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 18ಕ್ಕೂ ಅಧಿಕ ಕುರಿಗಳು ಗಾಯಗೊಂಡಿರುವ ಘಟನೆ ಬಳ್ಳಾರಿ ತಾಲ್ಲೂಕಿನ ಆಂಧ್ರಪ್ರದೇಶದ ಗಡಿ ಭಾಗದಲ್ಲಿರುವ ಕಾರೆಕಲ್ಲು ಗ್ರಾಮದ ಸಮೀಪ ನಡೆದಿದೆ.
ಕಾರೆಕಲ್ಲು ಗ್ರಾಮದ ಶೀನ ಎಂಬುವವರಿಗೆ ಸೇರಿದ ಕುರಿಗಳು ಅಪಘಾತದಲ್ಲಿ ಮೃತಪಟ್ಟಿವೆ. ಸೋಮವಾರ ಸಂಜೆ ಸುಮಾರು 4.30ರ ವೇಳೆಗೆ ಕುರಿಗಳನ್ನು ಮೇಯಿಸಿಕೊಂಡು ದೊಡ್ಡಿಯತ್ತ ಮರಳುತ್ತಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಂದ ಲಾರಿ ಕುರಿಗಳ ಹಿಂಡಿನ ಮೇಲೆ ಹರಿದಿದೆ ಎನ್ನಲಾಗಿದೆ.
ಲಾರಿಯ ಅಡಿಗೆ ಸಿಲುಕಿದ 50ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, 18ಕ್ಕೂ ಅಧಿಕ ಕುರಿಗಳು ಗಾಯಗೊಂಡಿವೆ. ಘಟನೆಯಿಂದ ಕುರಿಗಾಹಿ ಶೀನ ಅವರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಪಿಡಿ ಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles