ದುಬೈ: 2016 ರಿಂದ ದುಬೈನಲ್ಲಿ ನೆಲೆಸಿರುವ ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್ ಅವರು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಮರಳುವ ನಿರೀಕ್ಷೆಯಿದೆ. ಮುಷರಫ್ ಅವರನ್ನ ಪಾಕಿಸ್ತಾನಕ್ಕೆ ಶಿಫ್ಟ್ ಮಾಡಲು ಕುಟುಂಬ ನಿರ್ಧರಿಸಿದೆ ಎನ್ನಲಾಗಿದೆ. ಪಾಕ್ ಮಾಜಿ ಅಧ್ಯಕ್ಷರು ಕಳೆದ ಆರು ವರ್ಷಗಳಿಂದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದಕ್ಕೂ ಮೊದಲು, ಮುಷರಫ್ ಅವರು ತಮ್ಮ ಉಳಿದ ಜೀವನವನ್ನು ತಮ್ಮ ತಾಯ್ನಾಡಿನಲ್ಲಿ ಕಳೆಯುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಪಾಕಿಸ್ತಾನದಲ್ಲಿ ವಂಚನೆ ಆರೋಪದಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾಗಿದ್ದ ಅವರು ದೇಶದಿಂದ ಪರಾರಿಯಾಗಿದ್ದರು. 2016ರಿಂದಲೂ ಅವರು ದುಬೈನಲ್ಲಿ ವಾಸಿಸುತ್ತಿದ್ದಾರೆ.