ಬೆಳಗಾಯಿತು ವಾರ್ತೆ |Www.belagayithu.in
ಬಳ್ಳಾರಿ: ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ಎರಡು ವರೆ ವರ್ಷದ ಮಗುವನ್ನು ಉಳಿಸಿಕೊಳ್ಳಲು ತಾಯಿಯೇ ತನ್ನ ಲಿವರ್ ಕೊಡಲು ಸಿದ್ಧವಾಗಿದ್ದಾಳೆ. ತನ್ನ ಮಗುವಿಗೆ ಲಿವರ್ ಟ್ರ್ಯಾನ್ಸ್ ಪ್ಲ್ಯಾಂಟ್ ಮಾಡಲು ಹಣಕಾಸಿನ ಎದುರಾಗಿದ್ದು ಸಹಾಯ ಮಾಡುವಂತೆ ಪೋಷಕರು ಮನವಿ ಮಾಡಿದ್ದಾರೆ.
ಮೂಲತಃ ನಗರದಲ್ಲಿನ ಕೌಲ್ ಬಜಾರ್ ಟೈಲರ್ ಸ್ಟ್ರೀಟ್ ನಿವಾಸಿ ಮಹೇಶ್ ಅವರು ಕ್ಷೌರಿಕ ವೃತ್ತಿ ಮಾಡುತ್ತಿದ್ದು ತಾಯಿ ಎಂ. ಮಂಜುಳಾ ಅವರು ಗೃಹಿಣಿಯಾಗಿದ್ದಾರೆ. ಈ ದಂಪತಿಗಳಿಗೆ ಇಬ್ಬರು ಮಕ್ಕಳು ಇದ್ದಾರೆ. ಹಿರಿಯ ಮಗಳು ಪ್ರಣೀತಾ, ಎರಡನೇ ಮಗು ರಿಷಿ( 2 ವರ್ಷ 8 ತಿಂಗಳು ) ಕಳೆದ ಕೆಲವು ವರ್ಷಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಕ್ಷೌರಿಕ ವೃತ್ತಿ ಮಾಡುವ ಮಹೇಶ್ ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ತಮ್ಮ ಮಗನಿಗೆ ಚಿಕಿತ್ಸೆ ಕೊಡಿಸಲು ಈಗಾಗಲೇ ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. ಇದೀಗ ಮಗುವಿಗೆ ಲಿವರ್ ಟ್ರಾನ್ಸ್ ಪ್ಲ್ಯಾಂಟ್ ಮಾಡಬೇಕಾಗಿದೆ. ಲಿವರ್ ಟ್ರಾನ್ಸ್ ಪ್ಲ್ಯಾಂಟ್ ಮಾಡಲು ಸುಮಾರು 18 ಲಕ್ಷ ರೂಪಾಯಿ ವೆಚ್ಚವಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ತಮ್ಮ ಮಗನ ಉಳಿಸಿಕೊಳ್ಳಲು ಪೋಷಕರು ದಾನಿಗಳು ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.
ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ರಿಷಿ ಕಿದ್ವಾಯಿ ಆಸ್ಪತ್ರೆ ಕಿಮೋಥೆರಪಿ ಚಿಕಿತ್ಸೆ ಕೊಡಿಸಲಾಗಿದೆ. ಇದೀಗ ಮಣಿಪಾಲ ಆಸ್ಪತ್ರೆಯಲ್ಲಿ ಲಿವರ್ ಟ್ರಾನ್ಸ್ ಪ್ಲೆಂಟ್ ಮಾಡಬೇಕಾಗಿದ್ದು ಚಿಕಿತ್ಸೆಗೆ ಸುಮಾರು 18 ಲಕ್ಷ ರೂಪಾಯಿ ಹಣ ಖರ್ಚಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ ಎಂದು ಪೋಷಕರು ತಿಳಿಸಿದ್ದಾರೆ.
ಎಂ.ಮಂಜುಳಾ
ಕರ್ನಾಟಕ ಗ್ರಾಮೀಣ ಬ್ಯಾಂಕ್ ಬಳ್ಳಾರಿ
A/c: 10584101110793
IFSC code:PKGB0010584
Phone Pay:7406350074
ದೂರವಾಣಿ ಸಂಖ್ಯೆ: 7406350074





