50 ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಸಿಕ್ಕ ಪಿಡಿಒ

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ:
ಸಿಡಗಿನಮೊಳ ಗ್ರಾಮ ಪಂಚಾಯತ್‌ನ ಪಿಡಿಓ ಆಗಿರುವ ಮುಷರತ್ ಬಾನು ಅವರು ₹50,000 ಲಂಚ ಸ್ವೀಕರಿಸುವ ವೇಳೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿರುವ ಘಟನೆ ನಡೆದಿದೆ.
ದೂರುದಾರರಿಂದ ಕೆಲಸ ನೆರವೇರಿಸುವ ಸಲುವಾಗಿ ಲಂಚ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪೂರ್ವಯೋಜಿತವಾಗಿ ದಾಳಿ ನಡೆಸಿ, ಲಂಚ ಸ್ವೀಕರಿಸುವ ಕ್ಷಣದಲ್ಲೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಸಂಬಂಧ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles