ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿವೆ. ಈ ಮಧ್ಯೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ಫೋಟಕ ವಿಚಾರವೊಂದನ್ನು ಹೊರಗೆಡವಿದ್ದು, ಬಿಜೆಪಿ ಹಾಗೂ ಜೆಡಿಎಸ್ ನ ಹಲವು ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಬಿಜೆಪಿಯಲ್ಲಿರುವವರೆಲ್ಲರೂ ಆರ್.ಎಸ್.ಎಸ್ ಮೂಲದವರಲ್ಲ, ಉದಾಹರಣೆಗೆ ಸಚಿವ ಎಸ್.ಟಿ.ಸೋಮಶೇಖರ್ ಆರ್.ಎಸ್.ಎಸ್ ನವರಲ್ಲ. ಹೀಗೆ ಬಹಳ ಮಂದಿ ಇದ್ದಾರೆ. ಇದರ ಅರ್ಥ ಸೋಮಶೇಖರ್ ಮರಳಿ ಬರುತ್ತಾರೆ ಎಂದಲ್ಲ. ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಬರುವವರಿಗೆ ಸ್ವಾಗತ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಹಲವು ನಾಯಕರು ನನ್ನ ಸಂಪರ್ಕದಲ್ಲಿರುವುದು ನಿಜ. ಚುನಾವಣೆಗೆ ೯ ತಿಂಗಳು ಇದೆ. ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತದಲ್ಲಿ ನಂಬಿಕೆ ಇಟ್ಟು, ಪಕ್ಷದ ನಾಯಕತ್ವ ಒಪ್ಪಿಕೊಂಡು, ಪಕ್ಷಕ್ಕೆ ನಿಷ್ಠಾವಂತರಾಗಿ ಇರುವವರಿಗೆ ಟಿಕೇಟ್ ನೀಡುತ್ತೇವೆ ಎಂದು ಹೇಳಿದ್ದಾರೆ