36.2 C
Bellary
Wednesday, May 15, 2024

Localpin

spot_img

ಮಾತೃ ಭಾಷೆಯಲ್ಲಿ CAPF ಪರೀಕ್ಷೆ ಬರೆಯಲು ಅನುಮತಿ

ಬೆಳಗಾಯಿತು ವಾರ್ತೆ | www.belagayithu.in

ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) ಗಳಲ್ಲಿ ಕಾನ್‌ಸ್ಟೇಬಲ್‌ಗಳ ನೇಮಕಾತಿಗಾಗಿ ಪರೀಕ್ಷೆಯನ್ನು ಇದೇ ಮೊದಲ ಬಾರಿಗೆ ಹಿಂದಿ (Hindi) ಮತ್ತು ಇಂಗ್ಲಿಷ್ (English) ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ಇಲಾಖೆ ಹೇಳಿದೆ‌. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ದೇಶಾದ್ಯಂತ 128 ನಗರಗಳಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳಿಗೆ ಫೆಬ್ರವರಿ 20ರಿಂದ ಮಾರ್ಚ್ 7 ರ ವರೆಗೆ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮಾರ್ಗದರ್ಶನದಲ್ಲಿ ಗೃಹ ವ್ಯವಹಾರಗಳ ಸಚಿವಾಲಯವು 13 ಪ್ರಾದೇಶಿಕ ಭಾಷೆಗಳಲ್ಲಿ ಸಿಎಪಿಎಫ್ ಗಳ ನೇಮಕಾತಿಗಾಗಿ ಕಾನ್‌ಸ್ಟೇಬಲ್‌ (ಸಾಮಾನ್ಯ ಕರ್ತವ್ಯ) ಪರೀಕ್ಷೆ ನಡೆಸಲು ನಿರ್ಧರಿಸಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆ ಹೆಚ್ಚಿಸಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸಲು ಕೇಂದ್ರ ಗೃಹ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles