ಬಳ್ಳಾರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ವಿದ್ಯುತ್ ಬಿಲ್ ,ದಿನಬಳಕೆ ಸಾಮಾಗ್ರಿಗಳ ಬೆಲೆ ಏರಿಕೆ ವಿರುಧ್ಧ ಮತ್ತು ಕೋವಿಡ್ 19ನಲ್ಲಿ ಮೃತ ಪಟ್ಟ ಕುಟುಂಬಕ್ಕೆ ಐದು ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ನಗರದಲ್ಲಿ ಶುಕ್ರವಾರ ಬಳ್ಳಾರಿ ಜಿಲ್ಲಾ ಜನತಾದಳ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ನಗರದಲ್ಲಿನ ಜೆಡಿಎಸ್ ಪಕ್ಷದ ಕಚೇರಿಯಿಂದ ರಾಯಲ್ ವೃತ್ತ, ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದವರೆಗೂ ಬೆಲೆ ಏರಿಕೆ ಖಂಡಿಸಿ ಎತ್ತಿನ ಬಂಡಿಗಳ ಜಾಥ ಮೂಲಕ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಬಳ್ಳಾರಿ ಬೆಳಗಾಯಿತು ಪತ್ರಿಕೆಯೊಂದಿಗೆ ಮಾತನಾಡಿದ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಎನ್.ಟಿ.ಬೊಮ್ಮಣ್ಣ ಅವರು ಭ್ರಷ್ಟರೆಲ್ಲಾ ಜೈಲು ಸೇರಲಿ ನಮ್ಮ ಜನರು ಬಿಜೆಪಿಗೆ ಓಟು ನೀಡಿದರು ಆದರೆ ಭ್ರಷ್ಟರು ಬಿಜೆಪಿಗೆ ಸೇರಿದ್ದಾರೆ ಆದ್ದರಿಂದ ತೈಲ ಬೆಲೆ, ವಿದ್ಯುತ್ ಬೆಲೆ ಮುಂತಾದ ಬೆಲೆ ಎಚ್ಚಿಸಿ ಜನರನ್ನು ಸುಲಿಗೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಳಿ ನಡೆಸಿದರು. ಮುಂದಿನ ದಿನದಲ್ಲಿ ಪಕ್ಕದ ರಾಜ್ಯಗಳಂತೆ ರಾಜ್ಯದಲ್ಲಿಯೂ ಸಹ ಪ್ರಾದೇಶಿಕ ಪಕ್ಷಗಳನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ ಮೀನಳ್ಳಿ ತಾಯಣ್ಣ ವಿಜಯ್ ಕುಮಾರ್, ಸೇರಿದಂತೆ ಇತರರು ಇದ್ದರು.