ಬೆಳಗಾಯಿತು ವಾರ್ತೆ
ಬಳ್ಳಾರಿ: ಪೆಟ್ರೋಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಪಾದಾಚಾರಿ
ಓರ್ವ ಮಹಿಳೆ ಮೃತಪಟ್ಟು, ಮತ್ತೋರ್ವ ಮಹಿಳೆ ಗಂಭೀರವಾಗಿ ಗಾಯ ಗೊಂಡಿರುವ ಘಟನೆ ಬಳ್ಳಾರಿ ನಗರದ ಮೋತಿ ಸರ್ಕಲ್ ನಲ್ಲಿ ಭಾನುವಾರ ನಡೆದಿದೆ.
ಮೃತಳು ಮುಂಡರಗಿ ಗ್ರಾಮದ ರಫಿಯಾಬೇಗಂ(26). ಸಬೀನಾ ಗಾಯಗೊಂಡಿದ್ದು ವಿಮ್ಸ್ ನಲ್ಲಿ ಚಿಕಿತ್ಸೆ ಪಡೆ ಯುತ್ತಿದ್ದಾಳೆ. ಇಬ್ಬರು ಮಹಿಳೆಯರು ರಸ್ತೆ ದಾಟುತ್ತಿ
ರುವಾಗ ಹಿಂದಿನಿಂದ ಬಂದು ಪೆಟ್ರೋಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಘಟನೆ ನಡೆದಿದೆ. ಸಿಸಿ ಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಬಳ್ಳಾರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.